ರಾತ್ರಿ ತಾಪಮಾನ ಇಳಿಕೆಯಾಗುತ್ತಿರುವ ಕಾರಣ ಜಾನುವಾರುಗಳನ್ನು ಬೆಚ್ಚಗಿನ ಕೊಟ್ಟಿಗೆಯಲ್ಲಿ ಕಟ್ಟಬೇಕು. ದನಗಳಿಗೆ ಕಾಲುಬಾಯಿ ರೋಗ ಬರುವ ಸಾಧ್ಯತೆ ಇರುವುದರಿಂದ ಚುಚ್ಚುಮದ್ದು ಹಾಕಿಸಬೇಕು. ಒಣ ಮೇವನ್ನು ಬಿಸಿಲಲ್ಲಿ ಚೆನ್ನಾಗಿ ಒಣಗಿಸಿ ಚೀಲದಲ್ಲಿ ತುಂಬಿಡಬೇಕು. ಬೆಳಗಿನ ವೇಳೆಯಲ್ಲಿ ದನಗಳನ್ನು ಮೇಯಲು ಬಿಡಬಾರದು ಎಂದು ಪಶು ವೈದ್ಯರು ಸಲಹೆ ನೀಡಿದ್ದಾರೆ. ಕೋಳಿ ಸಾಕಾಣಿಕೆ ಕೇಂದ್ರದಲ್ಲಿ ವಿದ್ಯುತ್ ಬಲ್ಬ್‌ಗಳನ್ನು ಬಳಸಿ ಉಷ್ಣಾಂಶದ ಸ್ಥಿರತೆ ಕಾಪಾಡಲು ಪ್ರಯತ್ನಿಸಬೇಕು ಎಂದು ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ಎಸ್.ಪಾಟೀಲ ತಿಳಿಸಿದ್ದಾರೆ.