ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್ ಮಾತನಾಡಿ, ‘ರೈಲ್ವೆ ಇಲಾಖೆಯಲ್ಲಿ 3.5 ಲಕ್ಷ ಸಿಬ್ಬಂದಿ ಕೊರತೆ ಇದೆ. ಗ್ರೂಪ್ ಸಿ ನಲ್ಲಿ 2,74,000 ಹುದ್ದೆಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. 2019ರಿಂದ 2023ರವರೆಗೆ ಒಟ್ಟು 162 ರೈಲು ಅಪಘಾತಗಳು ಸಂಭವಿಸಿದ್ದು, ಸಾವಿರಾರು ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.