ಸೋಮವಾರ, ಮೇ 17, 2021
29 °C

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಹೋರಾಟ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವಸೂಗೂರು (ಶಕ್ತಿನಗರ): ದೇವಸೂಗೂರು ಮತ್ತು ಡಿ.ಯದ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಶುಕ್ರವಾರ ದೇವಸೂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಭೆಯಲ್ಲಿ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ದೇವಸೂಗೂರು, ಡಿ.ಯದ್ಲಾಪುರ, ಕಾಡ್ಲೂರು ಉಪ ಕೇಂದ್ರಗಳನ್ನು ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ, ಜೇಗರಕಲ್, ಮೀರಪುರಾ ಕೇಂದ್ರಗಳನ್ನು ಕಲಮಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮತ್ತು ಚಿಕ್ಕಸೂಗೂರು, ವಡ್ಲೂರು, ಶಾಖವಾದಿ ಉಪ ಕೇಂದ್ರಗಳನ್ನು ಚಂದ್ರಬಂಡಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕ ಸೇರಿಸಲಾಗಿದೆ.

50 ರಿಂದ 60 ಕಿಲೋ ಮೀಟರ್ ದೂರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇವೆ. ಲಸಿಕಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಸಭೆ ಸಮಾರಂಭಗಳಿಗೆ ತೆರಳಲು, ಆರೋಗ್ಯ ಸಿಬ್ಬಂದಿಗೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ತೊಂದರೆ ಆಗುತ್ತಿದೆ. ಅಲ್ಲದೆ, ಸೂಕ್ತ ಚಿಕಿತ್ಸೆಗಾಗಿ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣ ಆಗಿದೆ.

ಜಾಗದ ಕೊರತೆ ನೆಪ ಹೇಳಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕಾಗಿ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಡಿ.ಯದ್ಲಾಪುರ ಅಥವಾ ದೇವಸೂಗೂರು ಗ್ರಾಮದಲ್ಲಿ ಪ್ರತ್ಯೇಕವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಿಸಿ, ರೋಗಿಗಳಿಗೆ ಸೂಕ್ತ ಚಿಕಿತ್ಸೆಗಾಗಿ ಅನುವು ಮಾಡಿಕೊಡಬೇಕು ಎಂದು ವೈದ್ಯ ಡಾ.ಶಾರದಾ ಹುಲಿನಾಯಕ ಅವರು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ದೇವಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂಗನಗೌಡ ದೊಡ್ಡಿ, ಕಾರ್ಯದರ್ಶಿ ರೇಣುಕಾಮ್ಮ, ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ನಿರ್ಮಲಾ, ಆರೋಗ್ಯ ಸಹಾಯಕಿ ಹುಲಿಗೆಮ್ಮ, ಪ್ರಮುಖರಾದ ವಿರೇಶ, ಚನ್ನಬಸವ ಜಾನೇಕಲ್, ಜಿಂದಪ್ಪ, ಸುಭಾಶ, ನರಸಪ್ಪ , ಸಿ.ಸುರೇಶಗೌಡ, ಆಂಜಿನಯ್ಯ, ಶರಣಪ್ಪ ಮತ್ತಿತ್ತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.