ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಸ್ಪರ್ಧಾತ್ಮಕ ಪರೀಕ್ಷೆ: ಸಿದ್ಧತೆಗೆ ಸೂಚನೆ

Published 26 ಅಕ್ಟೋಬರ್ 2023, 15:25 IST
Last Updated 26 ಅಕ್ಟೋಬರ್ 2023, 15:25 IST
ಅಕ್ಷರ ಗಾತ್ರ

ರಾಯಚೂರು: ಅ29ರಂದು ಜಿಲ್ಲೆಯಲ್ಲಿ ವಿವಿಧ ನಿಗಮ ಮಂಡಳಿಗಳ ನೇಮಕಾತಿಗಳಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್ ದುರುಗೇಶ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ನಿಗಮ ಮಂಡಳಿಗಳ ನೇಮಕಾತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅ.29ರಂದು ಬೆಳಿಗ್ಗೆ 10,30ರಿಂದ ಮಧ್ಯಾಹ್ನ 12.30ರವರೆಗೆ ಮತ್ತು ಮದ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯ ರಾಯಚೂರಲ್ಲಿ 25 ಹಾಗೂ ಮಾನ್ವಿಯಲ್ಲಿ 6 ಸೇರಿದಂತೆ ಒಟ್ಟು 31 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

ಒಟ್ಟು 31 ಕೇಂದ್ರಗಳಲ್ಲಿ ಒಟ್ಟು 10,666 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಸಂಬಂಧಪಟ್ಟಂತೆ ಈಗಾಗಲೇ ವಸ್ತ್ರ ಸಂಹಿತೆಯು ಪ್ರಕಟಗೊಂಡಿದೆ. ಸರ್ಕಾರದಿಂದ ನೀಡಲಾದ ನಿಯಮಗಳಾನುಸಾರ ಪರೀಕ್ಷೆಗಳನ್ನು ನಡೆಸಬೇಕು ಮತ್ತು ಯಾವುದೇ ನಕಲು, ಕಾನೂನು ಬಾಹೀರ ಚಟುವಟಿಕೆಗಳು ಜರುಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆಗೆ ನೇಮಿಸಿದ ಅಧಿಕಾರಿಗಳು, ಅಭ್ಯರ್ಥಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕಣ್ಗಾವಲು ಅಳವಡಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ಮೂಲಸೌಲಭ್ಯಗಳನ್ನು ಒದಗಿಸಬೇಕು. ಆರೋಗ್ಯ ಇಲಾಖೆಯಿಂದ ವೈದ್ಯಕೀಯ ತಂಡಗಳನ್ನು ಪ್ರತಿ ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT