ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಒತ್ತಾಯ

Published 25 ಮೇ 2024, 16:13 IST
Last Updated 25 ಮೇ 2024, 16:13 IST
ಅಕ್ಷರ ಗಾತ್ರ

ರಾಯಚೂರು: ಶೈಕ್ಷಣಿಕ ವರ್ಷ ಆರಂಭಕ್ಕೆ ಮುನ್ನ ಖಾಲಿ ಹುದ್ದೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಶನಿವಾರ ನಗರದ ಕ್ಷೇತ್ರ ಶಿಕ್ಷಣಾಕಾರಿ ಚಂದ್ರಶೇಖರ ಭಂಡಾರಿಗೆ ಮನವಿ ಸಲ್ಲಿಸಿದರು.

ಪ್ರತಿ ವರ್ಷ ಶೈಕ್ಷಣಿಕ ವರ್ಷ ಪ್ರಾರಂಭವಾದ ತಿಂಗಳುಗಳ ನಂತರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು ಶಾಲಾ ಆರಂಭದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಸಿದರೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.

ರಾಯಚೂರು ತಾಲ್ಲೂಕಿನಲ್ಲಿ ಸಾವಿರಾರು ಶಿಕ್ಷಕರ ಕೊರತೆಯಿದ್ದು ಮಕ್ಕಳ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಲ್ಲಿ ಬೋಧನೆಗೆ ಅನುಕೂಲವಾಗಲಿದೆ. ಅತಿಥಿ ಶಿಕ್ಷಕರ ಸೇವೆಯನ್ನು ವರ್ಷವೀಡಿ ಪರಿಗಣಿಸಿ ಸಮಯಕ್ಕೆ ಸರಿಯಾಗಿ ಗೌರವಧನ ಪಾವತಿಸಬೇಕು ಎಂದು ಆಗ್ರಹಿಸಿದರು. 

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹ ಮಲಯಾಬಾದ್, ಗೌರವಾಧ್ಯಕ್ಷೆ ಲಕ್ಷ್ಮಿ ನಾಯಕ, ಪದಾಧಿಕಾರಿಗಳಾದ ಪ್ರಶಾಂತ, ಎಸ್.ರವಿ, ತಿಮ್ಮಪ್ಪ ಅನ್ವರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT