ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂತ್ರಸ್ತ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ: ಎಸಿ ಕಚೇರಿ ಪೀಠೋಪಕರಣ ಜಪ್ತಿ

Published 30 ಜನವರಿ 2024, 22:30 IST
Last Updated 30 ಜನವರಿ 2024, 22:30 IST
ಅಕ್ಷರ ಗಾತ್ರ

ರಾಯಚೂರು: ದದ್ದಲ್ ಏತ ನೀರಾವರಿ ಯೋಜನೆಯಡಿ ಭೂಮಿ ಸ್ವಾಧೀನ ಪಡಿಸಿಕೊಂಡು ರೈತರಿಗೆ ಪರಿಹಾರ ನೀಡದ ಕಾರಣ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಆದೇಶದಂತೆ ಇಲ್ಲಿಯ ಉಪ ವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಯಿತು.

‘ಏತ ನೀರಾವರಿ ಯೋಜನೆಗಾಗಿ ರಾಯಚೂರು ಜಿಲ್ಲೆಯ ಜೆ.ಮಲ್ಲಾಪುರು, ದದ್ದಲ್, ಸುಂಕೇಶ್ವರ ಗ್ರಾಮದಲ್ಲಿ 2008, 2009 ಹಾಗೂ 2012ರಲ್ಲಿ ನೂರಾರು ಎಕರೆ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಆದರೆ, ಸಂತ್ರಸ್ತ ರೈತರಿಗೆ ಈವರೆಗೂ ಪರಿಹಾರ ನೀಡಿಲ್ಲ. ಸಣ್ಣ ನೀರಾವರಿ ಇಲಾಖೆ ಹಾಗೂ ರಾಯಚೂರು ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ರೈತರ ಭೂಮಿ ‌ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಪ್ರತಿ ಎಕರೆಗೆ ₹ 2.98 ಲಕ್ಷ ಪರಿಹಾರ ಕೊಡಬೇಕಿತ್ತು’ ಎಂದು ರೈತರ ಪರವಾಗಿ ಬಂದಿದ್ದ ವಕೀಲ ಬಸಪ್ಪ ಹೇಳಿದರು.

ನ್ಯಾಯಾಲಯ 10 ಬಾರಿ ನೋಟಿಸ್‌ ನೀಡಿದರೂ ಅಧಿಕಾರಿಗಳು ಯಾವುದೇ ಕ್ರಮ ವಹಿಸಿರಲಿಲ್ಲ. ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಎಸಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT