ಬುಧವಾರ, ಸೆಪ್ಟೆಂಬರ್ 22, 2021
21 °C
ಅಭಿನಂದನಾ ಸಮಾರಂಭದಲ್ಲಿ ಶಾಸಕ ಆರ್. ಬಸನಗೌಡ ಹೇಳಿಕೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: 'ಉಪ ಚುನಾವಣೆಯಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳಿಂದ ಶಾಸಕನನ್ನಾಗಿ ಆಯ್ಕೆ ಮಾಡಿದ ಕ್ಷೇತ್ರದ ಮತದಾರರ ಋಣ ನನ್ನ ಮೇಲೆ ಇದೆ. ಮತದಾರರ ಭಾವನೆಗಳಿಗೆ ಧಕ್ಕೆಯಾಗದಂತೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ‘ ಎಂದು ಶಾಸಕ ಆರ್. ಬಸನಗೌಡ ಹೇಳಿದರು.

ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಸಮಾಜದ ಹಿರಿಯ ಮುಖಂಡ ಅಂದಾನಪ್ಪ ಗುಂಡಳ್ಳಿ ಮಾತನಾಡಿ, ‘ಬಣಜಿಗ ಸಮಾಜಕ್ಕೆ ಶಾಸಕರು ಬರುವ ತಾಲ್ಲೂಕು, ಜಿಲ್ಲಾ ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣೆಯಲ್ಲಿ ಹೆಚ್ಚಿನ ಅವಕಾಶ ಕೊಡಬೇಕು‘ ಎಂದರು.

ಡಾ. ಶಿವಶರಣಪ್ಪ ಬಾಳೆಕಾಯಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಇರಲಿ, ನಂತರ ಎಲ್ಲರೂ ಕೂಡಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.

ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಉಮಕಾಂತಪ್ಪ ಸಂಗನಾಳ, ಡಾ.ಶಿವಶರಣಪ್ಪ ಇತ್ಲಿ, ಅಂದಾನಪ್ಪ ಗುಂಡಳ್ಳಿ, ಸಂಘದ ರಾಜ್ಯ ಕಾರ್ಯದರ್ಶಿ ಎನ್. ಅಮರೇಶ ಸಿಂಧನೂರು, ಶಶಿಕಾಂತ ಬ್ಯಾಳಿ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಗವಿಸಿದ್ದಪ್ಪ

ಸಾಹುಕಾರ, ಸೂಗಣ್ಣ ಬಾಳೇಕಾಯಿ, ನಾಗರಾಜ ಯಂಬಲದ, ನಾಗರಾಜ ಹಂಪನಾಳ, ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣ ಬ್ಯಾಳಿ ಇದ್ದರು. ಮಹಾಂತೇಶ ಬ್ಯಾಳಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು