ರಾಯಚೂರು: ‘ಕಾಂಗ್ರೆಸ್ ಪಕ್ಷದ ಲಕ್ಷಾಂತರ ಮಹಾನ್ ನಾಯಕರ ತ್ಯಾಗ ಬಲಿದಾನಗಳಿಂದ ದೇಶ ಬ್ರಿಟಿಷರ ದಬ್ಬಾಳಿಕೆಯಿಂದ ಸ್ವಾತಂತ್ರ್ಯಗೊಂಡಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಎ.ವಸಂತಕುಮಾರ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು.

‘ಡಿಸೆಂಬರ್ 28, 1885ರಲ್ಲಿ ದಾದಾ ಬಾಯಿ ನವರೋಜಿ ಹಾಗೂ ಇನ್ನಿತರ ಮಹಾನ್ ನಾಯಕರಿಂದ ಸ್ಥಾಪಿತವಾದ ಕಾಂಗ್ರೆಸ್ ಪಕ್ಷ ಈಸ್ಟ್ ಇಂಡಿಯಾ ಕಂಪನಿಯ ದಮನಕಾರಿ ಆಡಳಿತದ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮ ಎಂಬ ಜನಾಂದೋಲನ ನಡೆಸಿತು. ದೇಶದ ಪ್ರಥಮ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ದೇಶದ ಬಗೆಗಿನ ದೂರದೃಷ್ಟಿಯಿಂದ ದೇಶದ ಪ್ರಗತಿ ಸಾಧ್ಯವಾಗಿದೆ. ಡಾ. ಅಂಬೇಡ್ಕರ ಅವರ ಮುಖಾಂತರ ಸಂವಿಧಾನ ಭಾರತೀಯರಿಗೆ ಸಮರ್ಪಿಸಿದ್ದು ಕಾಂಗ್ರೆಸ್ ಪಕ್ಷ. ಆಧುನಿಕ ಭಾರತಕ್ಕೆ ಅಡಿಪಾಯ ಹೀಗೇ ಲಕ್ಷಾಂತರ ಯೋಜನೆ, ಕಾರ್ಯಕ್ರಮಗಳನ್ನು ಕೊಟ್ಟ ಕಾಂಗ್ರೆಸ್ ಪಕ್ಷ ಸದಾ ಸರ್ವ ಧರ್ಮ ಸಮನ್ವಯತೆಯನ್ನು ಕಾಪಾಡುವಲ್ಲಿ ಯಶಸ್ವಿ ಆಗಿದೆ’ ಎಂದರು.

ಕೆಪಿಸಿಸಿ ಮಾದ್ಯಮ ವಕ್ತಾರ ಡಾ.ರಝಾಕ್ ಉಸ್ತಾದ್, ಅಸ್ಲಂಪಾಶಾ, ಕೆಪಿಸಿಸಿ ಕಾರ್ಯದರ್ಶಿ ಅಸ್ಲಂಪಾಶಾ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣೆ, ಮಹ್ಮದ್ ಶಾಲಂ, ಕಾಂಗ್ರೆಸ್ ಅಧ್ಯಕ್ಷ ಶ್ರಿನಿವಾಸ ರೆಡ್ಡಿ, ಬಸವರಾಜ ದರೂರು, ರಾಮಕೃಷ್ಣ ನಾಯಕ, ಮುರಳಿ ಯಾದವ, ಈಶಪ್ಪ, ಮೊಹಮ್ಮದ ಉಸ್ಮಾನ, ಅಂಜಿನಕುಮಾರ, ಮರಿಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.