ಮಸ್ಕಿ: ‘ಕಾಂಗ್ರೆಸ್ ಸರ್ಕಾರ ಮಾತು ಕೊಟ್ಟಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಯೋಜನೆ ಟಿಕೀಸುವ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡಿದೆ’ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.

ತಾಲ್ಲೂಕಿನ ಮಾರಲದಿನ್ನಿ ಜಲಾಶಯ ಬಳಿ ಗುರುವಾರ ನಡೆದ ಮಾರಲದಿನ್ನಿ, ಅಡವಿಭಾವಿ, ಅಂಕುಶದೊಡ್ಡಿ ಗ್ರಾಮ ಪಂಚಾಯಿತಿಗಳ ‘ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿ ಕಡೆ’ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ಸರ್ಕಾರ ಶಿಕ್ಷಣ, ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 11 ವರ್ಷಗಳಲ್ಲಿ ದೇಶದ ಜನರ ಮೇಲೆ ಆರ್ಥಿಕ ಬಾರ ಹಾಕಿದೆ. ಅದನ್ನು ತಗ್ಗಿಸಲು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮಾಸಿಕ ₹ 2 ಸಾವಿರ ಹಣ, ಅನ್ನ ಭಾಗ್ಯ, ಉಚಿತ ವಿದ್ಯುತ್, ನಿರುದ್ಯೋಗ ಭತ್ಯ ನೀಡುತ್ತಿದೆ’ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೈಬುಸಾಬ ಮುದ್ದಾಪೂರ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್, ಮಾರಲದಿನ್ನಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬೀರಪ್ಪ ವೆಂಕಟಾಪೂರ, ಅಡವಿಭಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಯನ, ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮರಮ್ಮ ಸೇರಿದಂತೆ ಗ್ಯಾರಂಟಿ ಸಮಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಮೂರು ಗ್ರಾಮ ಪಂಚಾಯಿತಿಗಳ ಪಂಚ ಯೋಜನೆಗಳ ಮಹಿಳೆಯರು ಸೇರಿದಂತೆ ನೂರಾರು ಫಲಾನುಭವಿಗಳು ಪಾಲ್ಗೊಂಡಿದ್ದರು.

ಮಾಜಿ ಶಾಸಕರ ಅಭಿವೃದ್ಧಿ ಶೂನ್ಯ:

ನಂದವಾಡಗಿ ಏತ ನೀರಾವರಿ ಯೋಜನೆಗೆ ₹ 2 ಸಾವಿರ ಕೋಟಿ ಕೊಟ್ಟಿದ್ದು ಸಿದ್ದರಾಮಯ್ಯ ಸರ್ಕಾರ. ಇಲ್ಲಿನ ಮಾಜಿ ಶಾಸಕರು ಕೆಲಸ ಮಾಡದ ಗುತ್ತಿಗೆದಾರರಿಗೆ ಶೇ 90ರಷ್ಟು ಹಣ ಪಾವತಿ ಮಾಡಿಸಿದ್ದಾರೆ ಎಂದು ಶಾಸಕ ಆರೋಪಿಸಿದರು. ಪೈನಾನ್ಸ್ ವ್ಯವಹಾರ ಮಾಡುತ್ತಿದ್ದ ಮಾಜಿ ಶಾಸಕರಿಗೆ ಅಭಿವೃದ್ಧಿ ಎಂದರೆ ಏನು ಎಂಬುದು ಗೊತ್ತಿಲ್ಲ. ನನ್ನ ಅಭಿವೃದ್ಧಿ ಕೆಲಸಗಳನ್ನು ಸಹಿಸದೆ ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಏನು ಗೊತ್ತಿದೆ. ಎಂದು ಹೇಳುವ ಮೂಲಕ ಮಾಜಿ ಶಾಸಕ ಪ್ರತಾಪಗೌಡ ಪಾಟೀಲರ ಆಡಳಿತ ವೈಖರಿಯನ್ನು ಸಮಾರಂಭದಲ್ಲಿ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.