ಮೈತ್ರಿ ಪಕ್ಷಗಳಿಗೆ ಹೆಚ್ಚಿನ ಸ್ಥಾನದಲ್ಲಿ ಗೆಲುವು: ಐವಾನ್‌ ಡಿಸೋಜಾ

ಬುಧವಾರ, ಮೇ 22, 2019
29 °C

ಮೈತ್ರಿ ಪಕ್ಷಗಳಿಗೆ ಹೆಚ್ಚಿನ ಸ್ಥಾನದಲ್ಲಿ ಗೆಲುವು: ಐವಾನ್‌ ಡಿಸೋಜಾ

Published:
Updated:

ರಾಯಚೂರು: ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್‌–ಜೆಡಿಎಸ್‌ಗೆ ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎಂದು  ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವಾನ್ ಡಿಸೋಜಾ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಗಳೆಲ್ಲ ಸುಳ್ಳಾಗಿವೆ. ಈ ಚುನಾವಣೆ ಕೂಡಾ ಸುಳ್ಳಿನ ಮಧ್ಯೆಯೇ ನಡೆಯತ್ತಿದೆ. ಹೈದರಾಬಾದ್‌ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಬಿಜೆಪಿ ಯಾವುದೇ ಕೊಡುಗೆ ನೀಡಿಲ್ಲ ಎಂದರು.

ಸ್ಥಳೀಯ ಮಟ್ಟದಲ್ಲಿ ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಆದರೆ, ಮೋದಿ ನೋಡಿ ಮತಹಾಕಿ ಎಂದು ಕೇಳುತ್ತಿರುವುದು ಹಸ್ಯಾಸ್ಪದವಾಗಿದೆ. ಕೇಂದ್ರ ಸರ್ಕಾರದಿಂದ ರೈತರು, ದಲಿತರಿಗೆ, ಯುವಕರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಸಾಕಷ್ಟು ಅನ್ಯಾಯವಾಗಿದೆ ಎಂದು ದೂರಿದರು.

ಕಾಂಗ್ರೆಸ್‌ ಪಕ್ಷದಿಂದ ಸರ್ವ ಜನರ ಅಭಿವೃದ್ಧಿ ಸಾಧ್ಯ. ಸಂಸದ ಬಿ.ವಿ. ನಾಯಕ ಅವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ. ಹೀಗಾಗಿ ಜನರು ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಮತ ನೀಡಬೇಕು ಎಂದು ಕೋರಿದರು.

ಕಾಂಗ್ರೆಸ್‌ನ ಮುಖಂಡರಾದ ಪವನ ಪಾಟೀಲ, ಮಹಿಳಾ ಘಟಕದ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ಬೆಣ್ಣೆ, ಶಶಿಕಲಾ ಭೀಮರಾಯ, ರಾಣಿ ರಿಚರ್ಡ್, ಅಭಿರಾಮ್ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !