ಬುಧವಾರ, ಮಾರ್ಚ್ 22, 2023
19 °C

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್, ಅಡಿಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಗುರುವಾರ ಮಸ್ಕಿಯಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಿ.ನಾಯಕ ಅವರು ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.

ಪ್ರತಿಭಟನಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು.

ಬಸವೇಶ್ವರ ವೃತ್ತದಿಂದ ಆರಂಭವಾದ ಜಾಥಾವು ವಾಲ್ಮೀಕಿ ವೃತ್ತ, ಕನಕವೃತ್ತ, ಮುಖ್ಯ ಬಜಾರ. ಅಶೋಕ ವೃತ್ತ, ಹಳೆಯ ಬಸ್ ನಿಲ್ದಾಣದ ಮೂಲಕ ಸಾಗಿ ಬಸವೇಶ್ವರ ನಗರದಲ್ಲಿನ ಕಾಂಗ್ರೆಸ್ ಕಚೇರಿಗೆ ಆಗಮಿಸಿತು.

ಶಾಸಕರಾದ ಆರ್. ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ. ಎಚ್.ಬಿ. ಮುರಾರಿ, ಸಿದ್ದಣ್ಣ ಹೂವಿನಭಾವಿ. ಆರ್. ಸಿದ್ದನಗೌಡ ಸೇರಿದಂತೆ ಅನೇಕ ಮುಖಂಡರು ಪಕ್ಷದ ವಿವಿಧ ಮೊರ್ಚಾಗಳ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು