ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಕಾಂಗ್ರೆಸ್ ಸದಸ್ಯತ್ವ ಅಭಿಯಾನ

Last Updated 11 ಡಿಸೆಂಬರ್ 2021, 12:09 IST
ಅಕ್ಷರ ಗಾತ್ರ

ಮಸ್ಕಿ: ದೇಶದಲ್ಲಿ ಕಾಂಗ್ರೆಸ್ ಬಲ ಮತ್ತಷ್ಟು ಹೆಚ್ಚ ತೊಡಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರ, ‘ಕಾಂಗ್ರೆಸ್ ಗೆ ದೊಡ್ಡ ಇತಿಹಾಸ ಇದೆ. ಕಾಂಗ್ರೆಸ್ ಕಾರ್ಯಕರ್ತರು ಸದಸ್ಯತ್ವ ಅಭಿಯಾನವನ್ನು‌ ಹಬ್ಬದ ಸಂಭ್ರಮದಂತೆ ಮಾಡಬೇಕು. ಕಾಂಗ್ರೆಸ್ ಸಾಮಾಜಿಕ ಜಾಲತಾಣ ದೇಶದಲ್ಲಿ ಪಕ್ಷದ ಸಂಘಟನೆಯಲ್ಲಿ ಹೊಸ ಕ್ರಾಂತಿ‌ ಮೂಡಿಸಿದೆ’ ಎಂದರು.

ಪಕ್ಷದ ಸಂಘಟನೆ ಹಾಗೂ ಸದಸ್ಯತ್ವ‌ ಅಭಿಯಾನ‌ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರೊಂದಿಗೆ ವರ್ಚುಲ‌ ಸಭೆ ನಡೆಸಲಾಯಿತು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌, ಬಸನಗೌಡ ಪಾಟೀಲ್ ಮುದವಾಳ, ತಾಲ್ಲೂಕು ಸಾಮಾಜಿಕ ಜಾಲತಾಣ ಅಧ್ಯಕ್ಷ ವೀರಭದ್ರ ಕೋಠಾರಿ ಹಾಗೂ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT