ಮಂಗಳವಾರ, ಜೂನ್ 15, 2021
21 °C

ಕಾಂಗ್ರೆಸ್ ಸೇರ್ಪಡೆ ಸುದ್ದಿ ಸುಳ್ಳು: ಶಾಸಕ ಕೆ.ಶಿವನಗೌಡ ನಾಯಕ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವದುರ್ಗ: ‘ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ನಾನು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ
ಯಾಗುತ್ತಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ. ಅದು ಸುಳ್ಳು. ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಶಾಸಕ ಕೆ.ಶಿವನಗೌಡ ನಾಯಕ ಆರೋಪಿಸಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ತೆಗೆದು ಹಾಕಲು ಪ್ರಯತ್ನಿಸುತ್ತಿದ್ದೇನೆ. ಶಾಸಕನಾಗಿ ಆಯ್ಕೆಯಾದ ನಂತರ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಶಿಕ್ಷಣ, ಉದ್ಯೋಗ, ವಸತಿ, ರಸ್ತೆ, ಕುಡಿಯುವ ನೀರು, ಶೌಚಾಲಯ ನಿರ್ಮಾಣ ಹಾಗೂ ಗ್ರಾಮೀಣ ಪ್ರದೇಶಕ್ಕೆ ಸಾರಿಗೆ ಸೌಲಭ್ಯ ಒದಗಿಸಲು ಸಾಕಷ್ಟು ಅನುದಾನ ತಂದಿದ್ದೇನೆ’ ಎಂದು ಪತ್ರಿಕೆಗೆ ತಿಳಿಸಿದರು.

‘ತಾಲ್ಲೂಕಿನ ಸರ್ವತೋಮುಖ ಅಭಿವೃದ್ದಿಗೆ ಸಂಕಲ್ಪ ಮಾಡಿದ ವ್ಯಕ್ತಿ ನಾನು. ನನ್ನ ಅಭಿವೃದ್ಧಿ ಕೆಲಸಗಳನ್ನು ಸಹಿಸದ ಪಟ್ಟಭದ್ರ ಹಿತಾಸಕ್ತಿಗಳು ವಿನಾಕಾರಣ ಅಪಪ್ರಚಾರ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೆರ್ಪಡೆಯಾಗಲಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಇಂಥ ವಂದತಿಗೆ ಕಾರ್ಯಕರ್ತರು ಕಿವಿಕೊಡದೇ ಪಕ್ಷ ಸಂಘಟನೆಗೆ ಶ್ರಮಿಸಿ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು