ಗುರುವಾರ , ಜೂಲೈ 9, 2020
25 °C

ರಾಯಚೂರು | ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಪೆಟ್ರೊಲ್, ಡೀಸೆಲ್ ದರ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ವಿರುದ್ಧ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಮಾತನಾಡಿ, ಬಿಜೆಪಿ ಅಧಿಕಾರ ಬಂದಾಗಿನಿಂದ ಪೆಟ್ರೊಲ್, ಡಿಸೆಲ್ ದರ ಏರಿಕೆ ಮಾಡುತ್ತಿದೆ. ಕೊರೊನಾ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಲ್ಲ. 2014 ರಿಂದ ಇಂದಿನವರೆಗೆ ದರ ₹ 25 ಏರಿಸಲಾಗಿದೆ ಎಂದು ದೂರಿದರು.

ದರ ಏರಿಕೆಯಿಂದ ಜನಸಾಮಾನ್ಯರ ಮೇಲೆ ಆರ್ಥಿಕ ಭಾರ ಆಗುತ್ತಿದೆ. ಕೇವಲ ಆರ್ಥಿಕ ಖಜಾನೆ ತುಂಬಿಸಿಕೊಳ್ಳಲು ದರ ಏರಿಕೆಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಬಿ.ವಿ ನಾಯಕ, ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ಮುಖಂಡರಾದ ಕೆ.ಶಾತಪ್ಪ, ಬಸವರಾಜ ರೆಡ್ಡಿ, ಅಮರೇಗೌಡ ಹಂಚಿನಾಳ, ಎ.ವಸಂತಕುಮಾರ, ಹಂಪನಗೌಡ ಬಾದರ್ಲಿ, ಯಂಕಣ್ಣ ಯಾದವ್, ಅಸ್ಲಂ. ಪಾಶ, ಸಾಜೀದ್ ಸಮೀರ್, ನಿರ್ಮಲಾ ಬೆಣ್ಣೆ, ರಾಣಿ ರಿಚರ್ಡ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು