ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಭೂ ಸುಧಾರಣೆ ಕಾಯ್ದೆ ಹಿಂಪಡೆಯಲು ಒತ್ತಾಯ

Last Updated 20 ಆಗಸ್ಟ್ 2020, 11:57 IST
ಅಕ್ಷರ ಗಾತ್ರ

ರಾಯಚೂರು: ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೊರೊನಾ ನಿಯಂತ್ರಣ ವಿಷಯದಲ್ಲಿ‌ ಭ್ರಷ್ಟಾಚಾರ ನಡೆಯುತ್ತಿದ್ದು ಉಚ್ಛ ನ್ಯಾಯಾಲಯದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‍್ಯಾಲಿ ಮೂಲಕ ಆಗಮಿಸಿದ ಪದಾಧಿಕಾರಿಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ದೇಶದಾದ್ಯಂತ ಕೋವಿಡ್ ವಿರುದ್ಧ ಜನರು ಜೀವನಮರಣ ಹೋರಾಟ ನಡೆಸುತ್ತಿದ್ದು ರಾಜ್ಯ ಬಿಜೆಪಿ ಸರ್ಕಾರ ಸಾಮಗ್ರಿ ಖರೀದಿಸುವ ಭ್ರಷ್ಟಾಚಾರದಲ್ಲಿ‌ ಮುಳುಗಿದೆ.ರಾಜ್ಯದಲ್ಲಿ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತಂದಿರುವುದು ರೈತ ವಿರೋಧಿ ನಿಲುವಾಗಿದೆ ಎಂದು ತಿಳಿಸಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ ಮಾತನಾಡಿ,ರಾಜ್ಯದ ಮಲೆನಾಡು,ಕರಾವಳಿ ಮತ್ತು ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಅತಿವೃಷ್ಟಿಯಿಂದಾಗಿ‌ ಅಪಾರ ಪ್ರಮಾಣದ ಹಾನಿಯಾಗಿದೆ. ಜನ ಜಾನುವಾರು,ಸಾವು ನೋವು ಸಂಭವಿಸಿದ್ದು, ಅತಿವೃಷ್ಟಿ ನಿರ್ವಹಣೆಯಲ್ಲಿ ವೈಫಲ್ಯ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.

ಎಐಸಿಸಿ ಕಾರ್ಯದರ್ಶಿ ಎನ್. ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ, ಮುಖಂಡರಾದ ಎ.ವಸಂತ ಕುಮಾರ, ಜಿ.ಬಸವರಾಜ ರೆಡ್ಡಿ, ಕೆ.ಶಾಂತಪ್ಪ, ಅಮರೆಗೌಡ ಹಂಚಿನಾಳ, ಸಾಜಿದ್ ಸಮೀರ್, ನಿರ್ಮಲ ಬೆಣ್ಣೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT