ಮಂಗಳವಾರ, ಸೆಪ್ಟೆಂಬರ್ 17, 2019
22 °C
ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಡಿ.ಕೆ.ಶಿವಕುಮಾರ ಬಂಧನ ಖಂಡಿಸಿ ಪ್ರತಿಭಟನೆ

Published:
Updated:
Prajavani

ರಾಯಚೂರು: ಶಾಸಕ ಡಿ.ಕೆ.ಶಿವಕುಮಾರ ಅವರನ್ನು ವಿನಾಕಾರಣ ಇ.ಡಿ. ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಪಕ್ಷದ ಸದಸ್ಯರು ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬುಧವಾರ ಪ್ರತಿಭಟನೆ ನಡೆಸಿದರು.

ವಿಚಾರಣೆಗೆ ಸಹಕರಿಸಿಲ್ಲ ಎಂದು ಆರೋಪಿಸಿದ ಅಧಿಕಾರಿಗಳು, ಡಿ.ಕೆ.ಶಿವಕುಮಾರ ಅವರನ್ನು ರಾಜಕೀಯ ಪ್ರೇರಿತವಾಗಿ ಬಂಧನ ಮಾಡಿದ್ದಾರೆ. ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ತನಿಖಾ ಸಂಸ್ಥೆಗಳ ಮೂಲಕ ಬಿಜೆಪಿಯೇತರ ಪಕ್ಷಗಳ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಲ್ಕು ದಿನಗಳಿಂದ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ ಸಮರ್ಪಕವಾಗಿ ಉತ್ತರ ನೀಡಿದರೂ, ಅಧಿಕಾರಿಗಳು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿ ಬಂಧನ ಮಾಡಿರುವುದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ದೂರಿದರು.

ದೇಶದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸೇಡಿನ ರಾಜಕಾರಣ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಇಂತಹ ಕ್ರಮಗಳನ್ನು ಕೈಬಿಟ್ಟು, ಬಂಧನ ಮಾಡಿರುವ ಡಿ.ಕೆ.ಶಿವಕುಮಾರ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಸುಧೀಂದ್ರ ಜಾಗೀರದಾರ, ಜಿ.ಶಿವಮೂರ್ತಿ, ಹನುಮಂತ ಜೂಕೂರು, ಆಂಜನೇಯ ಕುರುಬದೊಡ್ಡಿ, ಅಸ್ಲಂಪಾಷ, ಜಿ.ಸುರೇಶ, ನಿರ್ಮಲಾ ಬೆಣ್ಣೆ, ಶ್ರೀದೇವಿ ರಾಜಶೇಖರ ನಾಯಕ, ರಂಜಿತಾ ಹೀರಾ, ಸಾಜೀದ ಸಮೀರ, ಬಸವರಾಜ ಅತ್ತನೂರು, ರಾಮಕೃಷ್ಣ ನಾಯಕ, ಬಸವರಾಜ, ಮಹ್ಮದ್ ರಿಯಾಜ್, ರಾಣಿ ರಿಚರ್ಡ್‌, ವಂದನಾ, ಶಶಿಕಲಾ ಭೀಮರಾಯ, ಶ್ರೀನಿವಾಸ ಪೋತಗಲ್, ನರಸಿಂಹನಾಯಕ, ಶ್ರೀಧರರೆಡ್ಡಿ, ಮಲ್ಲಿಕಾರ್ಜುನ ಪಾಟೀಲ ಇದ್ದರು.

Post Comments (+)