ಬಿಜೆಪಿ ವಿರುದ್ಧ ಕಾಂಗ್ರೆಸ್ ಧರಣಿ

7

ಬಿಜೆಪಿ ವಿರುದ್ಧ ಕಾಂಗ್ರೆಸ್ ಧರಣಿ

Published:
Updated:
Prajavani

ರಾಯಚೂರು: ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ಪಕ್ಷ ಆಪರೇಷನ್ ಕಮಲ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ಧರಣಿ ನಡೆಸಿದರು.

ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ಹಾಗೂ ಕಾಂಗ್ರೆಸ್‌ ಶಾಸಕರನ್ನು ಖರೀದಿಸುವ ಅಸಹ್ಯ ರಾಜಕಾರಣ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ರಕ್ಷಿಸುತ್ತೇವೆ ಎಂದು ಹೇಳುವ ಬಿಜೆಪಿ ನಾಯಕರು ಆಪರೇಷನ್ ಕಮಲದ ಹೆಸರಿನಲ್ಲಿ ಶಾಸಕರನ್ನು ಖರೀದಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯ ಸಾಜಿದ್ ಸಮೀರ್, ಮುಖಂಡರಾದ ಅಮರೇಗೌಡ ಹಂಚಿನಾಳ, ನರಸನಗೌಡ, ಅಸ್ಲಂಪಾಷ, ಶರಣಪ್ಪ ಕಡಗೋಳು, ಸುಧೀಂದ್ರ, ಜಿ.ಸುರೇಶ, ತಾಯಣ್ಣ ನಾಯಕ, ನರಸಿಂಹ ನಾಯಕ, ನಾಗೇಂದ್ರಪ್ಪ ಮಟಮಾರಿ, ರಾಣಿ ರಿಚರ್ಡ್‌, ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !