ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ಸಾರಿ ಕಡೆಗಣಿಸಿದರೆ ಕಾಂಗ್ರೆಸ್‌ಗೆ ಪೆಟ್ಟು: ಶಬ್ಬೀರ್‌ ಚೌದ್ರಿ

Published 26 ಫೆಬ್ರುವರಿ 2024, 14:01 IST
Last Updated 26 ಫೆಬ್ರುವರಿ 2024, 14:01 IST
ಅಕ್ಷರ ಗಾತ್ರ

ಮಸ್ಕಿ: ‘ಮಾಜಿ ಸಚಿವ, ಗಂಗಾವತಿಯ ಇಕ್ಬಾಲ್‌ ಅನ್ಸಾರಿ ಅವರನ್ನು ಕಾಂಗ್ರೆಸ್‌ ಕಡೆಗಣಿಸಿದರೆ ಲೋಕಸಭಾ ಚುನಾವಣೆ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಪೆಟ್ಟು ಬಿಳಲಿದೆ’ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಅಧ್ಯಕ್ಷ ಶಬ್ಬೀರ್‌ ಚೌದ್ರಿ ತಿಳಿಸಿದ್ದಾರೆ.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮಾಜಿ ಸಚಿವ ಅನ್ಸಾರಿ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡಿ ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರ ಮತಗಳು ಹಂಚಿ ಹೋಗದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಜಿಲಾನಿ ಖಾಜಿ, ನೂರ್‌ ಅಹ್ಮದ್‌, ಖದೀರ್‌ ಚೌದ್ರಿ, ಮಸ್ತಾಫಾ ನಿಶಾನಿ ಹಾಗೂ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT