ರಾಯಚೂರು: ‘ಕಾಂಗ್ರೆಸ್ ಮಹಿಳೆಯರಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಗ್ಯಾರಂಟಿ ಯೋಜನೆಗಳು ನೆರವಾಗಿವೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಅಭಿಪ್ರಾಯಪಟ್ಟರು.

ಇಲ್ಲಿನ ಆಶಾಪೂರಿ ಕನ್ವೆನ್ಶನ್ ಹಾಲ್ನಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಮಹಿಳೆಯರು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ಕುಟುಂಬ, ಸಮಾಜಕ್ಕೆ ಆರ್ಥಿಕ ಶಕ್ತಿ ಹೆಚ್ಚುತ್ತದೆ. ಮಕ್ಕಳ ಶಿಕ್ಷಣಕ್ಕೂ ವಿಶೇಷವಾಗಿ ಅವಕಾಶ ಸಿಗುತ್ತದೆ’ ಎಂದರು.

‘ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ರಾಜ್ಯದಾದ್ಯಂತ ಓಡಾಡುವ ಅವಕಾಶ ಸಿಕ್ಕಿದೆ. ಕುಟುಂಬ ನಿರ್ವಹಣೆಗೆ ₹2 ಸಾವಿರ ನೀಡುತ್ತಿದೆ. ಜೊತೆಗೆ ಅನ್ನಭಾಗ್ಯ ನೀಡುತ್ತಿದೆ’ ಎಂದು ತಿಳಿಸಿದರು.

‘ಮಹಿಳಾ ಶಕ್ತಿಯೇ ದೇಶದ ಶಕ್ತಿ. ಮಹಿಳೆಯರು ಆರೋಗ್ಯದ ಕಡೆ ಹೆಚ್ಚಾಗಿ ಗಮನಹರಿಸಬೇಕು’ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಶಿವಮೂರ್ತಿ, ಮಹ್ಮದ್ ಶಾಲಂ, ಶ್ರೀದೇವಿ ನಾಯಕ, ಪ್ರತಿಭಾ ರೆಡ್ಡಿ, ನಾಗವೇಣಿ ಪಾಟೀಲ, ಸುರೇಖಾ, ಆರತಿ, ಮಂಜುಳಾ, ನಾಗರತ್ನ, ನಿರ್ಮಲಾ, ಲಕ್ಷ್ಮೀ, ದೇವಮ್ಮ, ವಿಜಯಲಕ್ಷ್ಮಿ, ಬಸಮ್ಮ, ರೇಣುಕಾ, ಸುಜಾತಾ, ಗೌತಮಿ, ರಂಗಮ್ಮ ಉಪಸ್ಥಿತರಿದ್ದರು.

ಕಾಂಗ್ರೆಸ್ ಮುಖಂಡ ಶಾಂತಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ಸ್ವಾಗತಿಸಿದರು. ಪ್ರತಿಭಾ ಗೋನಾಳ ನಿರೂಪಿಸಿದರು.

ದೇಶದ ಸಂವಿಧಾನದಿಂದ ಮಹಿಳೆಯರಿಗೆ ಸಮಾನತೆ ದೊರೆತಿದೆ. ಅದೇ ರೀತಿ ಕಾಂಗ್ರೆಸ್ ಪ್ರತಿಯೊಬ್ಬರಿಗೂ ಸಮಾನ ಸ್ಥಾನಮಾನ ನೀಡಿದೆ
ಸೌಮ್ಯ ರೆಡ್ಡಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.