ಮಂಗಳವಾರ, ಜನವರಿ 19, 2021
19 °C

ಬಿಎಸ್‌ವೈ ವಿರುದ್ಧ ಬಿಜೆಪಿಯಲ್ಲೇ ಸಂಚು: ಆರ್.ಬಿ.ತಿಮ್ಮಾಪುರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ‘ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಸಲು ಬಿಜೆಪಿ ನಾಯಕರೇ ಒಳಸಂಚು ನಡೆಸಿದ್ದು, ಜೊತೆಗೆ ಯಾವುದಾದರೊಂದು ಆರೋಪದಲ್ಲಿ ಯಡಿಯೂರಪ್ಪ ಅವರನ್ನು ಸಿಲುಕಿಸಿ, ಪುನಃ ಜೈಲಿಗೆ ಕಳುಹಿಸುವ ಹುನ್ನಾರವನ್ನೂ ಸಹ ನಡೆಸಿದ್ದಾರೆ’ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ದೂರಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಯಡಿಯೂರಪ್ಪ ಅವರ ಸರ್ಕಾರವು, ಮರಾಠ ಅಭಿವೃದ್ದಿ ಪ್ರಾಧಿಕಾರ ಮಾಡಿರುವುದು ಮತ್ತು ವೀರಶೈವ ಲಿಂಗಾಯತರನ್ನು 2ಎ ಸೇರ್ಪಡೆ ಮಾಡಲು ಹೊರಟಿರುವುದು ಚುನಾವಣೆ ತಂತ್ರವಾಗಿದೆಯೇ ಹೊರತು ಕಾಳಜಿ ಅಲ್ಲ ಎಂದು ಟೀಕಿಸಿದರು.

ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿ ಮಾಡಬೇಕು. ನಿರ್ಲಕ್ಷಿಸಿದರೆ, ತೀವ್ರ ಹೋರಾಟ ಮಾಡ ಬೇಕಾಗುತ್ತದೆ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಂದ ಮಾದಿಗ ಸಮಾಜಕ್ಕೆ ಯಾವುದೇ ಉಪಯೋಗವಿಲ್ಲ. ಮತಕ್ಕಾಗಿ ಮಾತ್ರ ಬಳಸಿಕೊಂಡು ಸಮಾಜವನ್ನು ಹಳ್ಳಕ್ಕೆ ದೂಡಿದ್ದಾರೆ. ಸದಾಶಿವ ಆಯೋಗ ಬಗ್ಗೆ ಮಾತನಾಡಲು ಕಾರಜೋಳಗೆ ನೈತಿಕತೆ ಇಲ್ಲ ಎಂದರು.

ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ, ಕರ್ನಾಟಕ ರಾಜ್ಯ ಮಾದಿಗ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಾಲಸ್ವಾಮಿ ಕೊಡ್ಲಿ, ಹನುಮಂತಪ್ಪ ಮುದ್ದಾಪುರ, ನಾಗರಾಜಕವಿತಾಳ,   ವೆಂಕಟೇಶ ರಾಗಲಪರ್ವಿ, ಖಾಜಾ ಹುಸೇನ್ ರೌಡಕುಂದಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು