ಕವಿತಾಳ: ‘ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ ಹಾಗೂ ಸಮಾನತೆಯನ್ನು ಒದಗಿಸಿದ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು’ ಎಂದು ಮುಖ್ಯಾಧಿಕಾರಿ ಜಗನ್ನಾಥ ಹೇಳಿದರು.

ಪಟ್ಟಣ ಪಂಚಾಯಿತಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಪಟ್ಟಣ ಪಂಚಾಯಿತಿ ಸಿಬ್ಬಂದಿ ರಾಘವೇಂದ್ರ ಮುತಾಲಿಕ್ ಅವರು ಸಂವಿಧಾನ ಪೀಠಿಕೆಯನ್ನು ಓದಿ ಹೇಳಿದರು.

ಸದಸ್ಯರಾದ ಎಂ.ರಾಘವೇಂದ್ರ, ಲಾಳೇಶ ನಾಯಕ, ಮುಖಂಡರಾದ ಹರಳಪ್ಪ ತುಪ್ಪದೂರು, ಹುಚ್ಚಪ್ಪ ವಡವಟ್ಟಿ, ಮೌನೇಶ ಕೊಡ್ಲಿ, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರದೀಪ ಕುಮಾರ ಮತ್ತು ಮಲ್ಲಪ್ಪ ಚಾಗಿ ಉಪಸ್ಥಿತರಿದ್ದರು.

ಇಲ್ಲಿನ ಸರ್ಕಾರಿ ಶಾಲೆಗಳು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪೊಲೀಸ್ ಠಾಣೆಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.