ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಗೋದಾಮು ನಿರ್ಮಾಣ

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಳಕೆ
Last Updated 4 ಅಕ್ಟೋಬರ್ 2020, 3:39 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಿಂದ ಗೋದಾಮುಗಳ ನಿರ್ಮಾಣಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ‘ಗ್ರಾಮೀಣ ಗೋದಾಮು’ ಹೆಸರಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅಂದಾಜು ಮೊತ್ತ ₹ 13.80ಲಕ್ಷದಿಂದ ₹ 19.50ಲಕ್ಷ ವೆಚ್ಚದಲ್ಲಿ ಗೋದಾಮುಗಳನ್ನು ನಿರ್ಮಿಸಲಾಗುತ್ತಿದೆ.

ಪ್ರತಿ ಗೋದಾಮು ನಿರ್ಮಾಣ ಕಾಮಗಾರಿಯಲ್ಲಿ ಸುಮಾರು 50 ಕೂಲಿಕಾರ್ಮಿಕರಿಗೆ 14 ದಿನಗಳ ವರೆಗೆ ಉದ್ಯೋಗ ನೀಡಲಾಗುತ್ತಿದೆ.

ತಾಲ್ಲೂಕಿನ ಒಟ್ಟು 17 ಗ್ರಾಮ ಪಂಚಾಯಿತಿಗಳ ಪೈಕಿ ಆರಂಭಿಕ ಹಂತದಲ್ಲಿ 5 ಗ್ರಾಮ ಪಂಚಾಯಿತಿಗಳನ್ನು ‘ಗ್ರಾಮೀಣ ಗೋದಾಮು’ ನಿರ್ಮಾಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ನೀರಮಾನ್ವಿ ಗ್ರಾಮದಲ್ಲಿ ‘ಗ್ರಾಮೀಣ ಗೋದಾಮು’ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ.

ಭೋಗಾವತಿ ಗ್ರಾಮದಲ್ಲಿ 1 ಹಾಗೂ ಪೋತ್ನಾಳದಲ್ಲಿ 2 ಗೋದಾಮುಗಳ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಬ್ಯಾಗವಾಟ ಹಾಗೂ ಕಪಗಲ್ ಗ್ರಾಮ ಪಂಚಾಯಿತಿಗಳಲ್ಲಿ ಗೋದಾಮು ನಿರ್ಮಾಣಕ್ಕೆ ಅನುಮೋದನೆ ದೊರಕಿದ್ದು
ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಎರಡನೇ ಹಂತದಲ್ಲಿ ಬೇಡಿಕೆ
ಅನುಸಾರ ಇನ್ನುಳಿದ ಗ್ರಾಮ ಪಂಚಾಯಿತಿಗಳ ವತಿಯಿಂದ ಗೋದಾಮುಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಖಾತ್ರಿ ಯೋಜನೆ ಅಡಿಯಲ್ಲಿ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಘಟಕ, ಕಾಂಪೌಂಡ್, ಶಾಲಾ ಕೈತೋಟ, ಬಿಸಿಯೂಟ ಕೊಠಡಿ ಹಾಗೂ ಅಂಗನವಾಡಿ ಕಟ್ಟಡ ನಿರ್ಮಾಣ ಹಾಗೂ ಪುರಾತನ ಕಲ್ಯಾಣಿಗಳ ಜೀರ್ಣೋದ್ಧಾರ ಕಾಮಗಾರಿಗಳ ಜತೆಗೆ ಗ್ರಾಮೀಣ ಗೋದಾಮುಗಳ ನಿರ್ಮಾಣ ಕೈಗೊಂಡಿರುವ ಬಗ್ಗೆ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT