ರಾಯಚೂರು: ‘ಆರ್ಥಿಕ ಬಲವರ್ಧನೆಗೆ ಸಹಕಾರ ಬ್ಯಾಂಕ್ ಸಹಕಾರಿಯಾಗಿದೆ’ ಎಂದು ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಅಭಿಪ್ರಾಯಪಟ್ಟರು.
ನಗರದ ರಾಯಚೂರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಬ್ಯಾಂಕ್ ನಿಂದ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ 12ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಸಹಕಾರ ಪತ್ತಿನ ಸಂಸ್ಥೆಗಳು ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಬಲವರ್ಧನೆಗಾಗಿ ನಿರಂತರ ಶ್ರಮಿಸುತ್ತಿವೆ. ಗ್ರಾಹಕರ ವಿಶ್ವಾಸವನ್ನು ಗಳಿಸುವಲ್ಲಿ ರಾಯಚೂರು ಸೌಹಾರ್ಧ ಸಹಕಾರಿ ಯಶಸ್ವಿಯಾಗಿದೆ’ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ರಾಯಚೂರು ಡಿವೈಎಸ್ಪಿ ಸತ್ಯನಾರಾಯಣರಾವ್ ಮಾತನಾಡಿದರು.
ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪುರ, ರಾಯಚೂರು ಸಹಕಾರಿ ಬ್ಯಾಂಕನ ಅಧ್ಯಕ್ಷ ವಿಶ್ವನಾಥ ಹಿರೇಮಠ, ಬಸವರಾಜ ನಾಗಡದಿನ್ನಿ, ವಿಜಯ ಮಹಾಂತೇಶ ಹಿರೇಮಠ, ನಾಗರಾಜ, ನರಸಿಂಹಲು, ರವಿ , ರಮೇಶ, ಮಂಜು ಉಪಸ್ಥಿತರಿದ್ದರು.