ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಮೂರು ಮಂದಿಗೆ ಪಾಸಿಟಿವ್‌

Last Updated 23 ಜೂನ್ 2020, 14:37 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಗೆ ಕೋವಿಡ್‌ ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 434 ಕ್ಕೆ ಏರಿಕೆಯಾಗಿದೆ.

ತೆಲಂಗಾಣದಿಂದ ಬಂದಿರುವ 32 ವರ್ಷದ ವ್ಯಕ್ತಿ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 51 ವರ್ಷದ ಮಹಿಳೆಗೆ ಹಾಗೂ ಮಹಾರಾಷ್ಟ್ರದಿಂದ ಹಿಂತಿರುಗಿದ್ದ 60 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಚಿಕಿತ್ಸೆಗಾಗಿ ಓಪೆಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತರ ಪೈಕಿ 307 ಜನರು ಗುಣಮುಖರಾಗಿದ್ದು, ಮನೆಗೆ ಮರಳಿದ್ದಾರೆ. ಸದ್ಯ 125 ಜನರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಜಿಲ್ಲೆಯಿಂದ ಇದೂವರೆಗೆ 20,722 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 19,397 ವರದಿಗಳು ನೆಗೆಟಿವ್ ಆಗಿವೆ. ಇನ್ನುಳಿದ 955 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT