ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: 1,521 ಮಾದರಿಗಳ ಫಲಿತಾಂಶ ನಿರೀಕ್ಷೆ

Last Updated 9 ಜೂನ್ 2020, 14:11 IST
ಅಕ್ಷರ ಗಾತ್ರ

ರಾಯಚೂರು:ಜಿಲ್ಲೆಯಿಂದ ಇದೂವರೆಗೆ 17,632 ಜನರ ಗಂಟಲಿನ ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 15,746 ವರದಿಗಳು ನೆಗೆಟಿವ್ ಆಗಿವೆ. ಇನ್ನುಳಿದ 1,521 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ.

ದೇವದುರ್ಗ ತಾಲ್ಲೂಕಿನಿಂದ 9, ಲಿಂಗಸೂಗೂರು ತಾಲ್ಲೂಕಿನಿಂದ 11, ಮಾನ್ವಿ ತಾಲ್ಲೂಕಿನಿಂದ 11, ಸಿಂಧನೂರು ತಾಲ್ಲೂಕಿನಿಂದ 28 ಮತ್ತು ರಾಯಚೂರು ತಾಲ್ಲೂಕಿನಿಂದ 16 ಸೇರಿ ಜೂನ್ ೯ ರಂದು 75 ಜನರ ಗಂಟಲಿನ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ 359 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದ್ದವರ ಪೈಕಿ 82 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT