ಶುಕ್ರವಾರ, ಆಗಸ್ಟ್ 6, 2021
21 °C
ಇದುವರೆಗೂ 517 ಜನರಿಗೆ ಸೋಂಕು; 404 ಮಂದಿ ಗುಣಮುಖ

ರಾಯಚೂರು ಜಿಲ್ಲೆಯಲ್ಲಿ ಆರು ಮಂದಿಗೆ ಪಾಸಿಟಿವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ ಆರು ಮಂದಿಗೆ ಕೋವಿಡ್ ದೃಢವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವವ ಸಂಖ್ಯೆ 111 ರಷ್ಟಾಗಿದೆ.

ಇದುವರೆಗೂ ಜಿಲ್ಲೆಯಲ್ಲಿ 517 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದಂತಾಗಿದ್ದು, ಅವರಲ್ಲಿ ಚಿಕಿತ್ಸೆ ಪಡೆದು 404 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ಜಿಲ್ಲೆಯಿಂದ ಶುಕ್ರವಾರ ಒಟ್ಟು 375 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.  ಇದೂವರೆಗೆ 24,445 ಜನರ ಗಂಟಲಿನ ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವುಗಳಲ್ಲಿ 22,364 ವರದಿಗಳು ನೆಗೆಟಿವ್ ಆಗಿವೆ. ಇನ್ನುಳಿದ 1,558 ಮಾದರಿಗಳ ಫಲಿತಾಂಶ ಬರಬೇಕಿದೆ.

ರಾಯಚೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ 118, ಸಿಂಧನೂರು ತಾಲ್ಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ 14, ಮಾನ್ವಿ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ 22 ಹಾಗೂ ಲಿಂಗಸೂಗೂರು ತಾಲ್ಲೂಕು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ 21 ಜನರು ಸೇರಿದಂತೆ ಒಟ್ಟು 175 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು