ಲಿಂಗಸುಗೂರು: ‘ಪತ್ರಿಕಾರಂಗ ಈ ಹಿಂದೆ ಸ್ವತಂತ್ರವಾಗಿತ್ತು. ಆದರೆ ಇಂದು ಕಾರ್ಪೊರೇಟ್ ಕಂಪನಿಗಳ ಹಿಡಿತದಲ್ಲಿ ಸಿಲುಕಿ ಉದ್ಯಮವಾಗಿ ಬದಲಾವಣೆ ಆಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತಾಡಿದರು.

‘ಪತ್ರಿಕೋದ್ಯಮ ಕವಲುದಾರಿಯಲ್ಲಿ ಸಾಗುತ್ತಿದೆ. ಹಣವಂತರು, ಕೈಗಾರಿಕೋದ್ಯಮಿಗಳು ಪತ್ರಿಕೋದ್ಯಮ ನಡೆಸುತ್ತಿರುವುದು ಆತಂಕಕಾರಿಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಅಂಕುಶ ಹಾಕಬೇಕಾಗಿದೆ ಹಾಗೂ ಪತ್ರಿಕೋದ್ಯಮವನ್ನು ಕಾರ್ಪೊರೇಟ್ ಕಂಪನಿಗಳಿಂದ ಸ್ವತಂತ್ರ್ಯಗೊಳಿಸಬೇಕಾಗಿದೆ’ ಎಂದರು.

‘ಪತ್ರಕರ್ತರಿಗೆ ಉದ್ಯೋಗ ಭದ್ರತೆ ಹಾಗೂ ರಕ್ಷಣೆ ಇಲ್ಲದಾಗಿದೆ. ಕಡಿಮೆ ಸಂಬಳಕ್ಕೆ ದುಡಿಯುವಂತಾಗಿದೆ. ಪತ್ರಕರ್ತರಿಗೂ ಕನಿಷ್ಠ ವೇತನ ಜಾರಿಯಾಗಬೇಕಿದೆ. ರಾಜ್ಯ ಸರ್ಕಾರ ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾವ್ಯಾಪಿ ಸಂಚಾರಕ್ಕಾಗಿ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ’ ಎಂದರು.

‘ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು. ಪ್ರಜಾಪ್ರಭುತ್ವ ಆರೋಗ್ಯದಿಂದ ಸಾಗಲು ಪತ್ರಕರ್ತರ ಪಾತ್ರ ದೊಡ್ಡದಾಗಿದೆ. ಪತ್ರಿಕೆಯಲ್ಲಿ ಪ್ರಕಟವಾಗುವ ಅಂಕಣಗಳು ಸರ್ಕಾರವನ್ನು ಬದಲಾವಣೆ ಮಾಡಿದ ಉದಾಹರಣೆ ಇವೆ. ಹೀಗಾಗಿ ಮುದ್ರಣ ಮಾಧ್ಯಮಕ್ಕೆ ಇಂದು ಹೆಚ್ಚು ಪ್ರಾಮುಖ್ಯತೆ ಇದೆ. ದೃಶ್ಯ ಮಾಧ್ಯಮದಲ್ಲಿ ದಿನದ 24 ಗಂಟೆ ಸುದ್ದಿ ಕೊಡುವ ವಿಚಾರದಲ್ಲಿ ಸ್ಪರ್ಧೆಗಿಳಿದಂತೆ ಸರಿ ತಪ್ಪು ನೋಡದೇ ಸುದ್ದಿ ಪ್ರಕಟಗೊಳಿಸುವ ಕೆಲಸ ನಡೆದಿದೆ. ನೈಜ ಸುದ್ದಿ ಪ್ರಕಟಿಸುವ ಬಗ್ಗೆ ಪತ್ರಕರ್ತರು ಹೆಚ್ಚು ಒತ್ತು ನೀಡಬೇಕು’ ಎಂದರು.

ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ಮಾತನಾಡಿ, ‘ದೇಶದ ಸ್ವಾತಂತ್ರ್ಯದಲ್ಲಿ ಪತ್ರಿಕೆಗಳ ಪಾತ್ರ ಮುಖ್ಯವಾಗಿದೆ. ಜಿಲ್ಲಾಮಟ್ಟದ ಪತ್ರಿಕೆಗಳ ಬೆಳವಣಿಗೆಗೆ ರಾಜ್ಯ ಸರ್ಕಾರ ಜಾಹೀರಾತು ನೀಡುವ ಮೂಲಕ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ’ ಎಂದರು.

ಸಿದ್ಧಲಿಂಗ ಸ್ವಾಮೀಜಿ, ಶಾಸಕರಾದ ಮಾನಪ್ಪ ವಜ್ಜಲ್, ಬಸನಗೌಡ ದದ್ದಲ್, ವಿಧಾನಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ, ಎ.ವಸಂತಕುಮಾರ, ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ಮಾಜಿ ಶಾಸಕ ಡಿ.ಎಸ್.ಹೂಲಗೇರಿ, ಪುರಸಭೆ ಅಧ್ಯಕ್ಷ ಬಾಬುರೆಡ್ಡಿ ಮುನ್ನೂರು, ಜಿಲ್ಲಾಧಿಕಾರಿ ಕೆ.ನಿತೀಶ, ಜಿ.ಪಂ ಸಿಇಒ ಈಶ್ವರ ಕಾಂದೂ, ಎಸ್ಪಿ ಪುಟ್ಟಮಾದಯ್ಯ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ್ ದಸ್ತಗಿರ ನದಾಫ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ನಯೋಪ್ರಾ ಅಧ್ಯಕ್ಷ ಭೂಪನಗೌಡ ಕರಡಕಲ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ, ಕಾರ್ಯದರ್ಶಿ ಎಂ.ಪಾಶಾ, ತಾಲ್ಲೂಕು ಅಧ್ಯಕ್ಷ ಗುರುರಾಜ ಗೌಡೂರು, ಕಾರ್ಯದರ್ಶಿ ಅಮರಯ್ಯ ಗಂಟಿ ಪಾಲ್ಗೊಂಡಿದ್ದರು.

‘ಪತ್ರಿಕೋದ್ಯಮ ವಿಭಾಗ ಬಂದ್ ಕಳವಳಕಾರಿ’

‘ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅನುದಾನದ ಕೊರತೆ ಮತ್ತು ವಿದ್ಯಾರ್ಥಿಗಳ ಕೊರತೆ ನೆಪವೊಡ್ಡಿ ಪತ್ರಿಕೋದ್ಯಮ ವಿಭಾಗ ಬಂದ್ ಮಾಡಿರುವುದು ಕಳವಳಕಾರಿಯಾಗಿದೆ’ ಎಂದು ಹಿರಿಯ ಪತ್ರಕರ್ತ ಬಿ.ಎಂ.ಹನೀಫ್ ಹೇಳಿದರು. ‘ಸರ್ಕಾರದ ಸಂಸ್ಥೆಗಳು ಮುಚ್ಚುತ್ತಿವೆ. ಖಾಸಗಿ ಸಂಸ್ಥೆಗಳಲ್ಲಿ ಪತ್ರಿಕೋದ್ಯಮ ನಡೆದಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ₹ 65 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಆದರೆ ಶಿಕ್ಷಣಕ್ಕೆ ಅನುದಾನ ಕೊರತೆ ಮಾಡುತ್ತಿದೆ. ಪತ್ರಕರ್ತರು ಹಾಗೂ ಶಿಕ್ಷಕರು ದಾರಿ ತಪ್ಪಿದರೆ ಇಡೀ ಸಮಾಜವೇ ದಾರಿ ತಪ್ಪುತ್ತದೆ. ಶಿಕ್ಷಣ ಮತ್ತು ಪತ್ರಿಕಾ ಕ್ಷೇತ್ರಗಳು ತನ್ನ ಪಾವಿತ್ರ್ಯತೆ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ರಾಜಕಾರಣಿ ಪತ್ರಕರ್ತರ ಮಧ್ಯೆ ಪ್ರೀತಿ ಮತ್ತು ದ್ವೇಷದ ಸಂಬಂಧವಿದೆ. ಬಹಳ ಸಮತೋಲನದಲ್ಲಿ ಸಂಬಂಧ ಕಾಯ್ದುಕೊಳ್ಳಬೇಕಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.