ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಸಿ ನೆಡುವ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಆರೋಪ

Published 13 ಫೆಬ್ರುವರಿ 2024, 14:15 IST
Last Updated 13 ಫೆಬ್ರುವರಿ 2024, 14:15 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಚನ್ನಳ್ಳಿ ಗ್ರಾಮದ ಜಮೀನು ಸರ್ವೆ ನಂಬರ್ 76ರ ಸರ್ಕಾರಿ ಗುಡ್ಡದ ಜಮೀನು ಹಾಗೂ ಸಿದ್ರಾಂಪುರ ಗ್ರಾಮದ ಜಮೀನು ಸರ್ವೆ ನಂಬರ್ 60ರಲ್ಲಿ (ಸರ್ಕಾರಿ ಗುಡ್ಡದ ಜಮೀನು) ಸಸಿ ನೆಡುವ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದ್ದು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕ ಒತ್ತಾಯಿಸಿದೆ.

ಸಿಂಧನೂರು ಅರಣ್ಯ ಇಲಾಖೆಯ ಅಧಿಕಾರಿ 2000 ಸಸಿ ನೆಡುವ ಕಾಮಗಾರಿಯಡಿ ಅಲ್ಪಸ್ವಲ್ಪ ಗಿಡಗಳನ್ನು ನೆಡೆಸಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಒಣಗಿ ಹೋಗಿದೆ ಎಂದು ಆರೋಪಿಸಿದೆ.

ಉನ್ನತ ಮಟ್ಟದ ಅಧಿಕಾರಿಗಳು ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತಕ್ಕೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ನಿರುಪಾದಿ ಗೋಮರ್ಸಿ, ದ್ಯಾವಣ್ಣ ಪಿ, ಶರಣಪ್ಪ ಹಂಚಿನಾಳ, ಚನ್ನಬಸವ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT