ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಚೆ ಕಚೇರಿ ಯೋಜನೆಗಳ ಸದುಪಯೋಗ ಪಡೆಯಿರಿ’

Published 30 ಜುಲೈ 2023, 15:14 IST
Last Updated 30 ಜುಲೈ 2023, 15:14 IST
ಅಕ್ಷರ ಗಾತ್ರ

ಸಿಂಧನೂರು: ‘ನ್ಯಾಯಾಲಯದ ಆವರಣದಲ್ಲಿ ಸ್ಥಾಪನೆಯಾಗಿರುವ ಉಪ ಅಂಚೆ ಕಚೇರಿಯ ಸೌಲಭ್ಯಗಳನ್ನು ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಾರುತಿ ಬಾಗಡೆ ಸಲಹೆ ನೀಡಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಭಾರತೀಯ ಅಂಚೆ ಇಲಾಖೆಯ ರಾಯಚೂರು ವಿಭಾಗ ಹಾಗೂ ತಾಲ್ಲೂಕು ನ್ಯಾಯವಾದಿಗಳ ಸಂಘದಿಂದ ನಡೆದ ನೂತನ ಉಪ ಅಂಚೆ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನ್ಯಾಯಾಲಯದ ಪಕ್ಕದಲ್ಲಿರುವ ಪ್ರವಾಸಿ ಮಂದಿರದ ಜಾಗವನ್ನು ನ್ಯಾಯಾಲಯದ ಉಪಯೋಗಕ್ಕೆ ಕೊಡುವಂತೆ ವಕೀಲರ ಸಂಘ ಮನವಿ ಮಾಡಿದೆ. ನನ್ನ ವ್ಯಾಪ್ತಿಯಲ್ಲಿ ಪ್ರಯತ್ನ ಮಾಡುತ್ತೇನೆ. ವಕೀಲರ ಸಂಘ ಸರ್ಕಾರದ ಮಟ್ಟದಲ್ಲಿಯೂ ಎಲ್ಲ ಈ ಸಂಬಂಧ ಶ್ರಮಿಸಬೇಕು’ ಎಂದು ತಿಳಿಸಿದರು.

ರಾಯಚೂರು ವಿಭಾಗದ ಅಂಚೆ ಅಧೀಕ್ಷಕ ವಿಜಯ್ ವಡೋಣಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಟ್ರಾಸಿಟಿ, ಎಲ್.ಎ.ಸಿ., ಎಂ.ಎಂ.ಆರ್.ಡಿ., ಕಮರ್ಷಿಯಲ್ ನ್ಯಾಯಾಲಯ ಸೇರಿದಂತೆ ವಿವಿಧ ವಿಶೇಷ ನ್ಯಾಯಾಲಯಗಳನ್ನು ಸಿಂಧನೂರಿನಲ್ಲಿ ಸ್ಥಾಪನೆ ಮಾಡಬೇಕು. ವಕೀಲರ ಸಂಘಕ್ಕೆ ಜಾಗದ ಕೊರತೆ ಇರುವ ಕಾರಣ ನಿವೇಶನ ಮಂಜೂರು ಮಾಡಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ ಮನವಿ ಮಾಡಿದರು.

3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಬಸಪ್ಪ ಬಾಲಪ್ಪ ಜಕಾತಿ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ದೀಪಾ.ಜಿ.ಮನೇರಕರ್, ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟಪ್ಪ ಕಾಂಬ್ಳೆ, ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆನಂದಪ್ಪ ಎಂ., ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆಚಪ್ಪ ದೊಡ್ಡ ಬಸವರಾಜ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ ಚಿಂಚಿರಿಕಿ, ಖಜಾಂಚಿ ವೀರಭದ್ರಗೌಡ, ಅಂಚೆ ನಿರೀಕ್ಷಕ ವೆಂಕಟೇಶರೆಡ್ಡಿ ಕೊಳ್ಳಿ, ಆರ್‌ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ, ವಕೀಲರಾದ ಎಂ.ಅಮರೇಗೌಡ, ಕೆ.ಅಮರೇಗೌಡ, ಜಿ.ಎಸ್.ಆರ್.ಕೆ.ರೆಡ್ಡಿ, ಡಿ.ಎಸ್.ಕಲ್ಮಠ, ಅಬ್ದುಲ್‌ಗನಿ, ಎಚ್‌.ಪಂಪಾಪತಿ, ವಿರೂಪಾಕ್ಷಪ್ಪ ಮಾಲಿಪಾಟೀಲ, ಶೇಖರಪ್ಪ ದುಮತಿ, ಪಂಪನಗೌಡ ಬಾದರ್ಲಿ ಹಾಗೂ ಖಾಜಿಮಲಿಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT