ಭಾನುವಾರ, ಜುಲೈ 25, 2021
27 °C
ಆಸ್ಪತ್ರೆಯಲ್ಲಿ 147 ಜನರು, ಗುಣಮುಖರಾದವರು 422

ಕೋವಿಡ್‌: ಆರು ಮಂದಿಗೆ ಪಾಸಿಟಿವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ ಆರು ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾದವರ ಸಂಖ್ಯೆ ಒಟ್ಟು 147 ರಷ್ಟಾಗಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಒಟ್ಟು 575 ರಷ್ಟಾಗಿದೆ. ವಿವಿಧೆಡೆಯಿಂದ ಸೋಮವಾರ 454 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದೂವರೆಗೆ 25,498 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 23,034 ವರದಿಗಳು ನೆಗೆಟಿವ್ ಆಗಿವೆ. ಇನ್ನುಳಿದ 1,883 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ.

ಸಾಂಸ್ಥಿಕ ಕ್ವಾರಂಟೈಗಳಲ್ಲಿ ಒಟ್ಟು 150 ಜನರಿದ್ದಾರೆ. ಅದರಲ್ಲಿ ರಾಯಚೂರು ತಾಲ್ಲೂಕಿನಲ್ಲಿ 93, ಸಿಂಧನೂರು ತಾಲ್ಲೂಕು 14, ಮಾನ್ವಿ ತಾಲ್ಲೂಕು 22 ಹಾಗೂ ಲಿಂಗಸೂಗೂರು ತಾಲ್ಲೂಕು 21 ಜನರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು