ಮುದಗಲ್: ಜವಾಹರ ನವೋದಯ ವಿದ್ಯಾಲಯದಲ್ಲಿ 40 ಜನಕ್ಕೆ ಕೋವಿಡ್

ಮುದಗಲ್: ‘ಸಮೀಪದ ಜವಾಹರ ನವೋದಯ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಒಟ್ಟು 40 ಜನರಿಗೆ ಕೋವಿಡ್ ದೃಢಪಟ್ಟಿದೆ’ ಎಂದು ಮಾಕಾಪುರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿರೂಪಾಕ್ಷಪ್ಪ ತಿಳಿಸಿದರು.
10 ಸಿಬ್ಬಂದಿ 30 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿದ ಕಾರಣ ಶಾಲೆಗೆ ಜಿಲ್ಲಾಧಿಕಾರಿ ಜ.31 ರವರೆಗೆ ರಜೆ ಘೋಷಿಸಿದ್ದಾರೆ.
ಈ ವಿದ್ಯಾಲಯದಲ್ಲಿ ಒಟ್ಟು 465 ವಿದ್ಯಾರ್ಥಿಗಳಿದ್ದು, 180 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಸೋಂಕಿತ ವಿದ್ಯಾರ್ಥಿಗಳನ್ನು ಪಾಲಕರೊಂದಿಗೆ ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಪ್ರಾಂಶುಪಾಲ ಬಸವರಾಜ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.