ಶನಿವಾರ, ಸೆಪ್ಟೆಂಬರ್ 25, 2021
24 °C

ರಾಯಚೂರು: ಐದು ವೈದ್ಯ ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್‌) ಕಾಲೇಜಿನಲ್ಲಿ ಕೇರಳದ ಒಬ್ಬ ವಿದ್ಯಾರ್ಥಿ ಸೇರಿ ಐದು ವಿದ್ಯಾರ್ಥಿಗಳಿಗೆ ಗುರುವಾರ ಕೋವಿಡ್‌ ದೃಢವಾಗಿದ್ದು, ಜಿಲ್ಲೆಯಲ್ಲಿ ಕೋವಿಡ್‌ ಮೂರನೇ ಅಲೆ ಆರಂಭವಾಗಿದೆ ಎನ್ನುವ ಆತಂಕ ಹರಡಿದೆ.

ಜುಲೈ 26 ರಿಂದ ಆರಂಭವಾಗಿದ್ದ ತರಗತಿಗಳನ್ನು ರದ್ದುಪಡಿಸಲಾಗಿದ್ದು, 650 ವಿದ್ಯಾರ್ಥಿಗಳೆಲ್ಲರ ಗಂಟಲು ದ್ರವ ಸಂಗ್ರಹಿಸಲಾಗಿದೆ. ವರದಿ ಬರುವವರೆಗೂ ಹಾಸ್ಟೆಲ್‌ಗಳಲ್ಲಿಯೆ ಪ್ರತ್ಯೇಕವಾಗಿ ಇರುವಂತೆ ಸೂಚಿಸಲಾಗಿದೆ.

‘ಕಾಲೇಜಿಗೆ ಬರುವಾಗ ವಿದ್ಯಾರ್ಥಿಗಳು ಕೋವಿಡ್‌ ನೆಗೆಟಿವ್‌ ವರದಿ ಸಲ್ಲಿಸಿದ್ದರು. ಆದರೂ, ಕೇರಳದ ಒಬ್ಬ ವಿದ್ಯಾರ್ಥಿ ಹಾಗೂ ಕರ್ನಾಟಕ ನಾಲ್ಕು ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢವಾಗಿದೆ. ಇದು ಡೆಲ್ಟಾ ವೈರಸ್‌ ಎಂದು ಗುರುತಿಸಲು ನಮಗೆ ಸಾಧ್ಯವಿಲ್ಲ. ಹೀಗಾಗಿ ಬೆಂಗಳೂರಿಗೆ ಸ್ಯಾಂಪಲ್‌ ಕಳುಹಿಸಲಾಗಿದೆ’ ಎಂದು ರಿಮ್ಸ್‌ ನಿರ್ದೇಶಕ ಡಾ.ಬಸವರಾಜ ಪೀರಾಪುರೆ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.