ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕೆ ಮಹಾಮೇಳ ಅಭಿಯಾನಕ್ಕೆ ಉದ್ಘಾಟಿಸಿದ ಡಿಸಿ

Last Updated 31 ಜುಲೈ 2021, 13:24 IST
ಅಕ್ಷರ ಗಾತ್ರ

ರಾಯಚೂರು: ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮುಕ್ತರಾಗಲು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯಬೇಕು. ಲಸಿಕೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸತೀಶ್ ಬಿ.ಸಿ. ಹೇಳಿದರು.

ತಾಲ್ಲೂಕಿನ ಯರಗೇರಾ ಗ್ರಾಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯರಗೇರಾ ಗ್ರಾಮ ಪಂಚಾಯಿಂದ ಶನಿವಾರ ಆಯೋಜಿಸಿದ್ದ ಕೋವಿಡ್-19ರ ಲಸಿಕಾ ಮಹಾಮೇಳ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಆಗಸ್ಟ್‌ನಿಂದ ಸೆಪ್ಟೆಂಬರ್‌ನಲ್ಲಿ ಕೋವಿಡ್ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎನ್ನುವ ತಜ್ಞರ ಸಲಹೆ ಮೇರೆಗೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣದ ಸರ್ಕಾರದ ಮಾರ್ಗಸೂಚಿಯಂತೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಜೊತೆಗೆ ಎರಡನೇ ಡೋಸ್ ಲಸಿಕೆ ಬಾಕಿ ಇರುವ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಯನ್ನು ಕೋವಿಡ್–19ರ ಲಸಿಕಾ ಮಹಾಮೇಳ ಅಭಿಯಾನದ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕೋವಿಡ್-19 ಮಹಾ ಲಸಿಕಾ ಅಭಿಯಾನ ಆರಂಭಗೊಂಡಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ರಾಮಕೃಷ್ಣ ಅವರು ಮಾತನಾಡಿದರು.

ಯರಗೇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣರಾವ್, ಉಪಾಧ್ಯಕ್ಷೆ ಶೋಭಾ ಗಾಳಿಗೇಶ್, ತಾಲ್ಲೂಕು ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ವಿಜಯ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ಡಿ.ಶಾಕೀರ, ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT