ಗುರುವಾರ , ಜುಲೈ 29, 2021
23 °C

ಕೋವಿಡ್‌ನಿಂದ ಸಾವು: ಕುಟುಂಬಗಳಿಗೆ ಪರಿಹಾರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಸೂಗೂರು(ಶಕ್ತಿನಗರ): ಚಿಕ್ಕಸೂಗೂರು ಗ್ರಾಮದಲ್ಲಿ ಕೋವಿಡ್‌ದಿಂದ ಮೃತಪಟ್ಟ ಬಡ ಕುಟುಂಬದವರಿಗೆ ವೈಯಕ್ತಿಕವಾಗಿ ತಲಾ ₹5 ಸಾವಿರ ನಗದು ಮತ್ತು ಆಹಾರ ಕಿಟ್‌ ಅನ್ನು ಮಂಗಳವಾರ ಶಾಸಕ ಬಸನಗೌಡ ದದ್ದಲ್ ಅವರು ವಿತರಿಸಿದರು.

ನಂತರ ಮಾತನಾಡಿದ ಅವರು, ರಾಯಚೂರು ನಗರ ಮತ್ತು ಗ್ರಾಮೀಣ ಸೇರಿ 1200 ಜನ ಕೋವಿಡ್‌ದಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಆದರೆ, ಜಿಲ್ಲಾಡಳಿತ 17 ಜನ ಮೃತಪಟ್ಟಿದ್ದಾರೆ ಎಂದು ಸರ್ಕಾರಕ್ಕೆ ವರದಿ ನೀಡಿದೆ. ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ, ಕೋವಿಡ್‌ದಿಂದ ಮೃತಪಟ್ಟ ಬಡ ಕುಟುಂಬದವರಿಗೆ ಪರಿಹಾರ ಸಿಗುವಂತಾಗಲಿ ಎಂದರು.

ದೇವಸೂಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ನರಸನಗೌಡ, ಮುಖಂಡ ಜಿ.ಶ್ರೀನಿವಾಸ, ಬಸವರಾಜ ವಕೀಲ, ಅಂಬಯ್ಯಗೌಡ ಮತ್ತಿತ್ತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು