ಮಂಗಳವಾರ, ಆಗಸ್ಟ್ 3, 2021
26 °C
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 378 ಕ್ಕೆ ಏರಿಕೆ

ಕೋವಿಡ್‌: ಮತ್ತೆ ಮೂರು ಪಾಸಿಟಿವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೋವಿಡ್‌ ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 378 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ರಾಯಚೂರು ನಗರದ 31 ವಯೋಮಾನದ ಇಬ್ಬರು ಮಹಿಳೆಯರಿಗೆ ಮತ್ತು ಆತ್ಕೂರು ಗ್ರಾಮದ 24 ವಯೋಮಾನದ ಪುರುಷನಿಗೆ ಸೋಂಕು ತಗುಲಿದೆ. ಚಿಕಿತ್ಸೆಗಾಗಿ ಓಪೆಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೊಂದಿಗೆ ಪ್ರಥಮ ಮತ್ತು ದ್ವಿತೀಯ ಸೋಂಕಿತರನ್ನು ಪತ್ತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಆಸ್ಪತ್ರೆಯಿಂದ ಇದುವರೆಗೂ ಕೋವಿಡ್‌ನಿಂದ ಗುಣಮುಖರಾದವರು ಒಟ್ಟು 82 ಇದೆ.

ಓಪೆಕ್‌ ಆಸ್ಪತ್ರೆಯಲ್ಲಿ ಸದ್ಯ 207 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 85 ಜನರನ್ನು ಆಸ್ಪತ್ರೆಯಿಂದ ಕ್ವಾರಂಟೈನ್‌ ಕೇಂದ್ರಕ್ಕೆ ಬಿಡುಗಡೆ ಮಾಡಲಾಗಿದೆ. ನಾಲ್ಕು ಜನರು ಮೃತಪಟ್ಟಿದ್ದು, ಒಂದು ಮಾತ್ರ ಕೋವಿಡ್‌ ಸಾವು. ಮೂವರು ಸೋಂಕಿತರು ಬೇರೆ ಅನಾರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಒಟ್ಟು 11,327 ಜನರನ್ನು ಇರಿಸಲಾಗಿತ್ತು. 10,968 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ 359 ಜನರು ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು