ಶುಕ್ರವಾರ, ಸೆಪ್ಟೆಂಬರ್ 24, 2021
24 °C

17 ರಂದು ಮಹಾ ಲಸಿಕೆ ಅಭಿಯಾನಕ್ಕೆ ಸಜ್ಜಾಗಿ: ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 17 ರಂದು ಮಹಾ ಲಸಿಕೆ ಅಭಿಯಾನ ಆಯೋಜಿಸಲಾಗುತ್ತಿದೆ. ನಿಗದಿತ ಗುರಿ ತಲುಪಲು ಪ್ರತಿಯೊಬ್ಬ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

17 ರಂದು ಜಿಲ್ಲೆಯಲ್ಲಿ ಲಸಿಕಾ ಮೇಳ ನಡೆಸಿ ಒಂದು ಲಕ್ಷ ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ನೀಡಲಾಗಿದೆ. ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡುವ ಮೂಲಕ ನಿಗದಿತ ಗುರಿ ಸಾಧಿಸಲು ಶ್ರಮವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಆಶಾ ಕಾರ್ಯಕರ್ತರು ಸೇರಿದಂತೆ ವಿವಿಧ ಅಧಿಕಾರಿಗಳು ಲಸಿಕೆ ಮಹಾ ಮೇಳದ ಪೂರ್ಣ ಅವಧಿಯ ಕೆಲಸ ನಿರ್ವಹಿಸಬೇಕು ಎಂದರು.

ಸರ್ಕಾರಿ, ಅನುದಾನಿತ ಶಾಲೆ ಹಾಗೂ ಕಾಲೇಜು ಉಪನ್ಯಾಸಕರು ತಮ್ಮ ವ್ಯಾಪ್ತಿಯಲ್ಲಿ ಬರುವ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಯನ್ನು ಲಸಿಕಾ ಕೇಂದ್ರ ಕರೆತಂದು ಮೊದಲ ಮತ್ತು ಎರಡನೇ ಲಸಿಕೆ ನೀಡುವ ಮೂಲಕ ವಿಶೇಷ ಮಹಾ ಲಸಿಕೆ ಅಭಿಯಾನದ ಯಶಸ್ಸಿಗೆ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಮಹಾ ಲಸಿಕೆ ಅಭಿಯಾನಕ್ಕೆ ವೈದ್ಯರ ತಂಡ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ನರ್ಸಿಂಗ್ ಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಲಸಿಕೆ ಅಭಿಯಾನಕ್ಕೆ ಬಳಸಿಕೊಳ್ಳುವಂತೆ ಹಾಗೂ ಖಾಸಗಿ ನರ್ಸಿಂಗ್ ಹೋಂಗಳ ಬಳಸಿಕೊಳ್ಳುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ಚುನಾವಣೆ ವೇಳೆ ಕರ್ತವ್ಯ ನಿರ್ವಹಿಸಿದ ರೀತಿಯಲ್ಲೇ ಮಹಾ ಲಸಿಕಾ ಮೇಳದ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶ್ರದ್ಧೆಯಿಂದ ಶ್ರಮವಹಿಸಿ ಕೆಲಸ ಮಾಡಿ ಮಹಾ ಮೇಳದ ಯಶಸ್ವಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಭೇಂದ್ರ ಸ್ವಾಮಿ ಮಾತನಾಡಿದರು. ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಕೆ.ನಾಗರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರಬಾಬು, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ವಿಜಯ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು