ಶುಕ್ರವಾರ, ಆಗಸ್ಟ್ 12, 2022
27 °C

ಶಾಸಕ ಹೂಲಗೇರಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುದಗಲ್ (ರಾಯಚೂರು): ಲಿಂಗಸುಗೂರು ಕ್ಷೇತ್ರದ ಶಾಸಕ ಡಿ.ಎಸ್.ಹೂಲಗೇರಿ ಅವರಿಗೆ ಕೋವಿಡ್‌ ದೃಢಪಟ್ಟಿದೆ ಎಂದು ಅವರ ಆಪ್ತ ಸಹಾಯಕ ಶರಣು ತಿಳಿಸಿದ್ದಾರೆ.

ಶಾಸಕರು ಕೆಲ ದಿನಗಳಿಂದ ಇಲಕಲ್ಲ ನಗರದ ಅವರ ನಿವಾಸದಲ್ಲಿಯೇ ಇದ್ದರು. ಇಲಕಲ್ಲನಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಅಲ್ಲಿಯೇ ವರದಿ ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಹೋಗಿದ್ದಾರೆ. ಅವರ ಪತ್ನಿಗೂ ಕೂಡ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಅವರಿಗೆ ನೆಗೆಟಿವ್ ಬಂದಿದೆ.

ಕುಟುಂಬ ಸದಸ್ಯರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ಧಾರೆ. ಶಾಸಕರ ಸಂಪರ್ಕದಲ್ಲಿರುವ ಮುಖಂಡರು ಹಾಗೂ ಕಾರ್ಯಕರ್ತರು ಸಹ ಕೊರೊನಾ ಪರೀಕ್ಷೆಗೆ ಒಳಗಾಗಬೇಕು ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು