ಸಿಂಧನೂರು: ‘ಬುದ್ಧ, ಬಸವ, ಅಂಬೇಡ್ಕರ್ ಅವರು ಕಂಡಂತಹ ಸಮತಾ ರಾಜ್ಯ ನಿರ್ಮಾಣದ ಕನಸನ್ನು ನನಸಾಗಿಸಲು ದುಡಿಯುವ ವರ್ಗದವರೆಲ್ಲರೂ ಒಂದಾಗಿ ಹೋರಾಟ ಮಾಡಬೇಕಾದ ಅವಶ್ಯಕತೆಯಿದೆ’ ಎಂದು ಸಿಪಿಐ ರಾಜ್ಯ ಘಟಕದ ಕಾರ್ಯದರ್ಶಿ ಸ್ವಾತಿ ಸುಂದರೇಶ್ ಕರೆ ನೀಡಿದರು.

ಸ್ಥಳೀಯ ಎಪಿಎಂಸಿ ಸಮುದಾಯ ಭವನದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಶತಮಾನೋತ್ಸವ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ‘ಸಿಪಿಐ ಮತ್ತು ಆರ್ಎಸ್ಎಸ್ 1925 ರಲ್ಲಿ ಸ್ಥಾಪನೆಗೊಂಡವು. ಅಸಮಾನ ಸಮಾಜ ನಿರ್ಮಾಣಕ್ಕಾಗಿ ಜಾತಿ, ಧರ್ಮ, ದೇವರುಗಳ ಹೆಸರಿನಲ್ಲಿ ಒಡೆದಾಳುವ ನೀತಿಯನ್ನು ಆರ್ಎಸ್ಎಸ್ ಅನುಸರಿಸುತ್ತಿದೆ. ಆದರೆ ಸಿಪಿಐ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಕೆಲಸ ಮಾಡುತ್ತಿದೆ’ ಎಂದರು.

‘ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯಕ್ಕೆ ವಿರುದ್ಧವಾಗಿ ಆಡಳಿತ ನಡೆಸುತ್ತಿದೆ. ದೇಶದ ಶೇ 60ರಷ್ಟು ಸಂಪತ್ತು ಕೇವಲ ಒಂದರಷ್ಟು ಜನರ ಕೈಯಲ್ಲಿದೆ. ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕುತಂತ್ರ ನಡೆಯುತ್ತಿದೆ. ಶ್ರೀಮಂತರ ಮತ್ತು ಬಡವರ ನಡುವೆ ಬಹುದೊಡ್ಡ ಕಂದಕ ಸೃಷ್ಟಿಯಾಗುತ್ತಿದೆ. ಇವುಗಳ ವಿರುದ್ಧ ಎಡಪಕ್ಷಗಳು, ಪ್ರಗತಿಪರ ಸಂಘಟನೆಗಳು ಐಕ್ಯ ಹೋರಾಟ ನಡೆಸಬೇಕು’ ಎಂದು ಹೇಳಿದರು.

ಸಿಪಿಐಎಂಎಲ್ ಮಾಸ್ಲೈನ್ ರಾಜ್ಯ ಘಟಕದ ಕಾರ್ಯದರ್ಶಿ ಡಿ.ಎಚ್.ಪೂಜಾರ್ ಮಾತನಾಡಿ ‘ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 76 ವರ್ಷಗಳು ಗತಿಸಿದರೂ ಬಡತನ, ಹಸಿವು, ನಿರುದ್ಯೋಗ, ಆರ್ಥಿಕ ಅಸಮಾನತೆ, ಆರೋಗ್ಯ, ಶಿಕ್ಷಣ ತಾರತಮ್ಯ ದೊಡ್ಡ ಪಿಡುಗಾಗಿ ಕಾಡುತ್ತಿದೆ. ಆಳುವ ಪ್ರಭುತ್ವಗಳು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿವೆ. ಸಮಾಜದಲ್ಲಿ ಗಲಭೆ, ಅಶಾಂತಿ ಸೃಷ್ಠಿಸುವ ಆರ್ಎಸ್ಎಸ್ ಸಂಘಟನೆಯಿಂದ ವಿದ್ಯಾರ್ಥಿ-ಯುವಜನರು ದೂರವಿರಬೇಕು’ ಎಂದರು.

ಸಿಪಿಐ ಕಾರ್ಯಕಾರಿ ಮಂಡಳಿ ರಾಜ್ಯ ಘಟಕದ ಸದಸ್ಯ ಡಾ.ಕೆ.ಎಸ್.ಜನಾರ್ಧನ ಮಾತನಾಡಿ, ‘ನ.30 ರಿಂದ ಸಿಪಿಐ ಜಾಥಾ ಕೆಜಿಎಫ್ನಿಂದ ಆರಂಭಗೊಂಡಿದ್ದು, ಡಿ.23 ರಂದು ಮೈಸೂರಿನಲ್ಲಿ ಮುಕ್ತಾಯಗೊಳ್ಳಲಿದೆ. 24 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ದುಡಿಯುವ ವರ್ಗ ಮತ್ತು ಇದರ ಪರವಾಗಿರುವ ಎಲ್ಲ ಸಂಘಟನೆಗಳನ್ನು ಒಂದೇ ವೇದಿಕೆಯಡಿ ತರುವುದು ಈ ಜಾಥಾದ ಉದ್ದೇಶವಾಗಿದೆ. ಪ್ರಸ್ತುತ ಸಂಭ್ರಮದ ಕಾಲವೂ ಹೌದು, ಸಂಗ್ರಾಮದ ಕಾಲವೂ ಹೌದು. ಬ್ರಿಟಿಷರ ವಿರುದ್ಧ ಹೋರಾಡಿ 1947ರಲ್ಲಿ ಸ್ವಾತಂತ್ರ್ಯ ಪಡೆಯಲಾಯಿತು. ಅಂದಿನಿಂದ ಇಂದಿನವರೆಗೂ ದೇಶದೊಳಗಿನ ಕೋಮುವಾದ ಮತ್ತು ಬಂಡವಾಳಶಾಹಿಗಳ ವಿರುದ್ಧ ಹೋರಾಟ ಮಾಡುತ್ತಾ ಬರಲಾಗುತ್ತಿದೆ. ಇದನ್ನು ಸಂಪೂರ್ಣವಾಗಿ ಹೋಗಲಾಡಿಸಲು ಐಕ್ಯ ಹೋರಾಟ ಅನಿವಾರ್ಯವಾಗಿದೆ’ ಎಂದು ಹೇಳಿದರು.

ಸಿಪಿಐ ಅಧ್ಯಕ್ಷ ಬಾಷಿಮಿಯಾ ಅಧ್ಯಕ್ಷತೆ ವಹಿಸಿದ್ದರು. ಎಐಟಿಯುಸಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಶೈಲರೆಡ್ಡಿ, ಸಿಪಿಐಎಂ ಕಾರ್ಯದರ್ಶಿ ಬಸವಂತರಾಯಗೌಡ ಕಲ್ಲೂರು ಮಾತನಾಡಿದರು. ಸಿಪಿಐಎಂಎಲ್ ಲಿಬರೇಶನ್ ರಾಜ್ಯ ಸಮಿತಿ ಸದಸ್ಯ ನಾಗರಾಜ ಪೂಜಾರ್, ದಲಿತ ಸಂಘರ್ಷ ಸಮಿತಿ (ಮೂರ್ತಿ ಬಣ)ದ ಜಿಲ್ಲಾ ಸಂಚಾಲಕ ಅಶೋಕ ನಂಜಲದಿನ್ನಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅಮೀನ್ಪಾಷಾ ದಿದ್ದಿಗಿ, ಶರಣಪ್ಪ ಮರಳಿ, ಜಮಾಅತೆ ಇಸ್ಲಾಮಿ ಹಿಂದ್ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಹುಸೇನ್ಸಾಬ್, ಇಫ್ಟಾ ಸಂಘಟನೆಯ ಮುಖಂಡರಾದ ಪ್ರಸನ್ನಕುಮಾರ, ಮೋಹನ್ಕುಮಾರ, ವಿನಯಗೌಡ, ಎಐಟಿಯುಸಿ ಜಿಲ್ಲಾ ಮುಖಂಡರಾದ ಸುಲೋಚನಾ, ಶಾಂತಾ ಗೊರೇಬಾಳ ಉಪಸ್ಥಿತರಿದ್ದರು. ಚಂದ್ರಶೇಖರ ಕ್ಯಾತನಹಟ್ಟಿ ಸ್ವಾಗತಿಸಿದರು. ಬಸವರಾಜ ಬಾದರ್ಲಿ ನಿರೂಪಿಸಿ, ಕ್ರಾಂತಿಗೀತೆ ಹಾಡಿದರು.

ಬೈಕ್ ರ್ಯಾಲಿ: ಇದಕ್ಕೂ ಮುನ್ನ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಹಿರೇಹಳ್ಳ ಸೇತುವೆ, ಕಿತ್ತೂರುರಾಣಿ ಚೆನ್ನಮ್ಮ ವೃತ್ತ, ಕನಕದಾಸಕ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಬಾಬು ಜಗಜೀವನರಾಂ ವೃತ್ತದ ಮೂಲಕ ಎಪಿಎಂಸಿ ಸಮುದಾಯ ಭವನದವರೆಗೆ ಬೈಕ್ ರ್ಯಾಲಿ ನಡೆಸಲಾಯಿತು.

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕೊಟ್ಟ ಯಾವುದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಕಾರ್ಪೊರೇಟ್ ಕಂಪನಿಗಳ ಪರ ಏಜೆಂಟ್ನಂತೆ ಕೆಲಸ ಮಾಡುತ್ತಿದೆ
ಸ್ವಾತಿ ಸುಂದರೇಶ್ ರಾಜ್ಯ ಘಟಕದ ಕಾರ್ಯದರ್ಶಿ ಸಿಪಿಐ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.