ಬುಧವಾರ, ಜುಲೈ 15, 2020
24 °C

ರಾಯಚೂರು | ಇಂಧನ ದರ ಏರಿಕೆ: ಸಿಪಿಐಎಂ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಪೆಟ್ರೊಲ್‌ ಹಾಗೂ ಡೀಸೆಲ್ ದರ ಏರಿಕೆಯನ್ನು ವಿರೋಧಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ದ ಪದಾಧಿಕಾರಿಗಳು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.

ದೇಶದಲ್ಲಿ ಈಗಾಗಲೇ ಕೋವಿಡ್–19 ಲಾಕ್ ಡೌನ್‌ನಿಂದಾಗಿ ಆರ್ಥಿಕ ಚಟುವಟಿಕೆ, ಕಾರ್ಖಾನೆಗಳು ಪುನಶ್ಚೇತನಗೊಂಡಿಲ್ಲ. ಸರ್ಕಾರ ಘೋಷಿಸಿದ ಪರಿಹಾರವೂ ದೊರೆತಿಲ್ಲ. ಇಂತಹ ಸಂದರ್ಭದಲ್ಲಿ ಸತತವಾಗಿ ಪೆಟ್ರೊಲ್– ಡಿಸೆಲ್ ದರ ಏರಿಕೆ ಮಾಡುತ್ತಿರುವುದು ಖಂಡನೀಯ. ದರ ಏರಿಕೆಯಿಂದ ವಾಹನ ಮಾಲೀಕರಿಗೆ ಸಮಸ್ಯೆಯಾಗದೇ ಅಗತ್ಯ ವಸ್ತುಗಳ ದರವೂ ಏರಿಕೆಯಾಗುತ್ತದೆ. ದರ ಏರಿಕೆ ಮಾಡುವ ಮೂಲಕ ತೈಲ ಕಂಪನಿ ಹಾಗೂ ಕೇಂದ್ರ ಸರ್ಕಾರ ಹಗಲು ದರೋಡೆಗೆ ಮುಂದಾಗಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಧಿಕಾರಿಗಳಾದ ಶರಣ ಬಸವ, ವರಲಕ್ಷ್ಮೀ, ಎಚ್. ಪದ್ಮಾ ಮತ್ತಿತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು