ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರವೇಯಿಂದ ಕ್ರಿಕೆಟ್‌ ಟೂರ್ನಾಮೆಂಟ್‌ ನಾಳೆಯಿಂದ

Last Updated 9 ಮಾರ್ಚ್ 2020, 14:14 IST
ಅಕ್ಷರ ಗಾತ್ರ

ರಾಯಚೂರು: ಯುವಕರಲ್ಲಿ ಕ್ರೀಡಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದಿಂದ ಇದೇ ಪ್ರಥಮ ಬಾರಿಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 11ರಿಂದ 26ರ ವರೆಗೆ ಓಪನ್ ಟೆನ್ನಿಸ್‌ಬಾಲ್ ಕ್ರಿಕೆಟ್ ಟೂರ್ನಾಮೆಂಟ್ ಆಯೋಜಿಸಿದೆ ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ವಿನೋದರೆಡ್ಡಿ ಎಂ. ತಿಳಿಸಿದ್ದಾರೆ.

ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ ಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದು, ಸಂಸದ ರಾಜಾ ಅಮರೇಶ್ವರ ನಾಯಕ ಉದ್ಘಾಟನೆ ಮಾಡುವರು. ಭಾರತ ಯು–19 ಅಂತರರಾಷ್ಟ್ರೀಯ ಕ್ರೀಡಾಪಟು ವಿದ್ಯಾಧರ ಪಾಟೀಲ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಜಿಲ್ಲಾ ಘಟಕದ ಅಧ್ಯಕ್ಷ ವಿನೋದರೆಡ್ಡಿ, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಸಂಚಾಲಕ ಚಾಂದ್ ಪಾಷಾ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT