ಭಾನುವಾರ ಹಳ್ಳದಲ್ಲಿ ಪ್ರತ್ಯಕ್ಷವಾಗಿ ಮೊಸಳೆ ಕುರಿಯೊಂದನ್ನು ಬಲಿ ಪಡೆದಿತ್ತು. ಈ ಬಗ್ಗೆ ಕುರಿಗಾಹಿಯೊಬ್ಬರಿಂದ ಮಾಹಿತಿ ಪಡೆದಿದ್ದ ನಮ್ಮ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಮುಖಂಡರು ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು.
ಅಲ್ಲದೇ ತಾಲ್ಲೂಕು ಅರಣ್ಯಾಧಿಕಾರಿ ಅರುಣಾ ಅವರ ಮೂಲಕ ಪ್ರಾದೇಶಿಕ ವಲಯ ಅರಣ್ಯಾಧಿಕಾರಿಗಳಿಗೆ ಮನವಿ ಪತ್ರ ರವಾನಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಹಳ್ಳದಲ್ಲಿ ಎಚ್ಚರಿಕೆಯ ಬ್ಯಾನರ್ ಅಳವಡಿಸಲಾಗಿದೆ.