ಬುಧವಾರ, ಅಕ್ಟೋಬರ್ 28, 2020
18 °C

ಧಾರಾಕಾರ ಮಳೆ: ಗದ್ದೆಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕವಿತಾಳ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿದಿದೆ.

ಸತತ ಮೂರು ಗಂಟೆಗಳ ಕಾಲ ಗಾಳಿ, ಗುಡುಗು ಸಹಿತ ಸುರಿದ ಮಳೆಯಿಂದಾಗಿ ಇಲ್ಲಿನ ಮುಖ್ಯ ರಸ್ತೆ ಮತ್ತು ಬಹುತೇಕ ಆಂತರಿಕ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಯಿತು.

ಕೆಲವು ಮನೆಗಳ ಮಣ್ಣಿನ ಗೋಡೆಗಳು ಕುಸಿದು ಬಿದ್ದಿವೆ. ಸಮೀಪದ ಬಸಾಪುರ ಗ್ರಾಮದಲ್ಲಿ ಭತ್ತದ ಗದ್ಧೆಗಳಿಗೆ ಹೆಚ್ಚಿನ ಪ್ರಮಾಣದ ನೀರು ನುಗ್ಗಿ ನಷ್ಟ ಸಂಭವಿಸಿದೆ ಎಂದು ರೈತರು ತಿಳಿಸಿದ್ದಾರೆ.

ಬಾಗಲವಾಡ ಗ್ರಾಮದಲ್ಲಿ ಅಲೆಮಾರಿ ಜನಾಂಗದ ಕುಟುಂಬಗಳು ವಾಸಿಸುತ್ತಿರುವ 8-10 ಗುಡಿಸಲುಗಳಿಗೆ ನೀರು ನುಗ್ಗಿದ ಪರಿಣಾಮ ಆಹಾರ ಧಾನ್ಯಗಳು ಹಾಳಾಗಿವೆ ಎಂದು ಯಲ್ಲಪ್ಪ, ರಾಮಣ್ಣ, ಲಿಂಗಪ್ಪ ಮತ್ತು ಶಂಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು