ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಹಾನಿ: ಸಮೀಕ್ಷೆ ಬೇಗ ಮುಗಿಸಿ

ರೈತ ಸಂಪರ್ಕ ಕೇಂದ್ರಕ್ಕೆ ತಹಶೀಲ್ದಾರ್‌ ಭೇಟಿ: ಸೂಚನೆ
Last Updated 9 ಆಗಸ್ಟ್ 2021, 4:40 IST
ಅಕ್ಷರ ಗಾತ್ರ

ಶಕ್ತಿನಗರ: ‘ಪ್ರವಾಹದಿಂದ ಸಂಭವಿಸಿದ ಮನೆ ಹಾಗೂ ಬೆಳೆ ಹಾನಿ ಕುರಿತು ತ್ವರಿತಗತಿಯಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಸೂಚನೆ ನೀಡಿದರು.

ಚಂದ್ರಬಂಡಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು.

ರೈತರು ತಮ್ಮ ಜಮೀನುಗಳ ಸರ್ವೆ ನಂಬರ್‌ ಮತ್ತು ಹಿಸ್ಸಾ ನಂಬರ್‌ವಾರು ತಾವು ಬೆಳೆದ ಬೆಳೆಯ ಮಾಹಿತಿಯನ್ನು ಚಿತ್ರ ಸಹಿತ ನಮೂದಿಸಬೇಕು ಎಂದು ತಿಳಿಸಿದರು.

ಚಂದ್ರಬಂಡಾ ಹೋಬಳಿ ವ್ಯಾಪ್ತಿಯ ಗ್ರಾಮ ಲೆಕ್ಕಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಾಲೇಕಾರರ ಜತೆಗೆ ಚರ್ಚಿಸಿ, ಆತ್ಕೂರು ಮತ್ತು ಡೊಂಗ ರಾಂಪುರ ಗ್ರಾಮಗಳ ಸುತ್ತಮುತ್ತ ಕ್ರಮಬದ್ಧವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು ಎಂದು ಹೇಳಿದರು.

ಉಪ ತಹಶೀಲ್ದಾರ್ ಅನಿಲಕುಮಾರ, ಕಂದಾಯ ನಿರೀಕ್ಷಕ ರಾಮು ಯಾದವ, ಕೃಷಿ ಅಧಿಕಾರಿ ತ್ರಿವೇಣಿ, ಸಹಾಯಕ ಅಧಿಕಾರಿ ಶೋಭಾ, ಮಾಲತಿ, ಗ್ರಾಮ ಲೆಕ್ಕಾಧಿಕಾರಿ ದೇಶಪಾಂಡೆ ಹಾಗೂ ಸಾಬಣ್ಣ ಸೇರಿ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT