ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಹಾನಿ ಪರಿಹಾರ ನೀಡಿ; ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಿಗೆ ರೈತರ ಮನವಿ

Last Updated 1 ಡಿಸೆಂಬರ್ 2021, 7:12 IST
ಅಕ್ಷರ ಗಾತ್ರ

ಮಾನ್ವಿ: ತಾಲ್ಲೂಕಿನಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೀಡಾದ ತೋಟಗಾರಿಕೆ ಬೆಳೆಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಂಗಳವಾರ ಇಲ್ಲಿಯ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನ ಮಾನ್ವಿ, ಹಿರೆಕೊಟ್ನೇಕಲ್ ಹಾಗೂ ಕುರ್ಡಿ ಹೋಬಳಿ ವ್ಯಾಪ್ತಿಯಲ್ಲಿ ರೈತರು ಪ್ರತಿ ಎಕರೆಗೆ ಸುಮಾರು ₹2 ಲಕ್ಷ ಖರ್ಚು ಮಾಡಿ ಬೆಳೆದಿದ್ದ ಮೆಣಸಿನಕಾಯಿ, ಈರುಳ್ಳಿ, ಟೊಮೆಟೊ ಹಾಗೂ ಇನ್ನಿತರ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಸಂಕಷ್ಟಕ್ಕೀಡಾಗಿದ್ದಾರೆ. ಅಧಿಕಾರಿಗಳು ಸಮೀಕ್ಷೆ ನಡೆಸಬೇಕು. ಪ್ರತಿ ಎಕರೆಗೆ ಕನಿಷ್ಠ ₹80 ಸಾವಿರ ಪರಿಹಾರ ನೀಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವೈ.ಬಸವರಾಜ ಹಿರೇಕೊಟ್ನೇಕಲ್, ಇತರ ಪದಾಧಿಕಾರಿಗಳಾದ ಮಹೇಶ ನಾಯಕ, ಸಣ್ಣ ಅಳ್ಳಪ್ಪ, ಭೀಮಣ್ಣ, ವೀರೇಶ, ಶಿವಕುಮಾರ, ವೆಂಕೋಬ, ಸಣ್ಣ ಈರಣ್ಣ, ವೆಂಕಟೇಶ, ಸಣ್ಣ ಮಹಾದೇವ, ರಮೇಶ, ವಿಜಯ, ದೊಡ್ಡ ಈರಣ್ಣ ಹಾಗೂ ಸಣ್ಣ ವೆಂಕೋಬ ಇದ್ದರು.

ನೀರಾವರಿ ಸೌಲಭ್ಯ ಕಲ್ಪಿಸಿ: ನರಸಿಂಹಲು

ರಾಯಚೂರು: ‘ಜಿಲ್ಲೆಯಲ್ಲಿ ಈಚೆಗೆ ಸುರಿದ ಮಳೆಗೆ ಬೆಳೆ ಹಾನಿಯಾಗಿದೆ. ಸರ್ಕಾರ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹಲು ನಾಯಕ ಕಮಲಾಪೂರು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ಹರಿಯುತ್ತಿವೆ. ಆದರೂ ರಾಯಚೂರು ತಾಲ್ಲೂಕಿನ ಕೆಲವು ಕಡೆ ಮಾತ್ರ ನೀರಾವರಿ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ಪ್ರದೇಶಕ್ಕೂ ನೀರಾವರಿ ಸೌಲಭ್ಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖಂಡ ಸಂಗಮೇಶ ನಾಯಕ, ಶಿವಪ್ಪ ನಾಯಕ ಹಾಗೂ ಈರಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT