ಮಂಗಳವಾರ, ಡಿಸೆಂಬರ್ 7, 2021
27 °C

ಡಿ.1 ರಿಂದ ಬೆಳೆಹಾನಿ ಪರಿಹಾರ: ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ‘ಮಳೆಯಿಂದ ಜಿಲ್ಲೆಯಲ್ಲಿ ಹಾನಿಯಾದ ಬೆಳೆ ಸಮೀಕ್ಷಾ ಕಾರ್ಯ ನವೆಂಬರ್ 30ರೊಳಗೆ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು,  ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡುವುದಕ್ಕೆ ತಿಳಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ  ಬೆಳೆದ ಭತ್ತ ನಾಶವಾಗಿದೆ. ಒಟ್ಟು 49,953 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ಈ ವರ್ಷ ಮಳೆಯಿಂದಾಗಿ ರೈತರು ಬೆಳೆ ಮುಟ್ಟದಂತಹ ಪರಿಸ್ಥಿತಿಯಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದೇವೆ ಎಂದರು.

‘ವಿಧಾನ ಪರಿಷತ್ ಚುನಾವಣೆಯಲ್ಲಿ ರಾಯಚೂರಿನಲ್ಲಿ ನಾವೇ ಗೆಲ್ಲುತ್ತೇವೆ. ನಮ್ಮ ನಾಯಕರು ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಗುರಿ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು