ರಾಯಚೂರು: ಮುಂಗಾರು ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಆಧಾರಿತ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಬೆಳೆ ವಿವರ ದಾಖಲಿಸಲು ಕಲ್ಮಲಾ ಹೋಬಳಿಯ ಕೃಷಿ ಜಮೀನುಗಳಿಗೆ ಕೃಷಿ ಅಧಿಕಾರಿ ಚೈತ್ರಾ ಪಾಟೀಲ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ರೈತರಲ್ಲಿ ಜಾಗೃತಿ ಮೂಡಿಸಿತು.
ಚೈತ್ರಾ ಪಾಟೀಲ ಮಾತನಾಡಿ, ‘ರೈತರು ಗೂಗಲ್ ಪ್ಲೇಸ್ಟೋರ್‌ನಿಂದ 'ಕ್ರಾಪ್ ಸರ್ವೆ ಆ್ಯಪ್- 2024' ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕು. ಬೆಳೆ ಸಮೀಕ್ಷೆ ದತ್ತಾಂಶ ವಿವಿಧ ಯೋಜನೆಗಳ ಲಾಭ ಪಡೆಯಲು ಇದು ನೆರವಿಗೆ ಬರಲಿದೆ’ ಎಂದರು.
ನಂತರ ಹತ್ತಿ ಬೆಳೆಯಲ್ಲಿ ಕೀಟ ಮತ್ತು ರೋಗಬಾಧೆ ಲಕ್ಷಣಗಳನ್ನು ಪರಿಶೀಲಿಸಿ, ಅದರ ಹತೋಟಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.