ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಸಕನಕ್ಕೆ ಸಹಕಾರಿ: ಶರಣಪ್ಪ ಮಡಿವಾಳರ್

ಶುಕ್ರವಾರ, ಏಪ್ರಿಲ್ 19, 2019
30 °C

ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಸಕನಕ್ಕೆ ಸಹಕಾರಿ: ಶರಣಪ್ಪ ಮಡಿವಾಳರ್

Published:
Updated:
Prajavani

ರಾಯಚೂರು: ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳರ್ ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆವರಣದಲ್ಲಿ ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಬಾಲಕರ ಬಾಲಮಂದಿರ ಮತ್ತು ಬಾಲಕಿಯರ ಬಾಲಮಂದಿರದಿಂದ ಮಂಗಳವಾರ ಆಯೋಜಿಸಿದ್ದ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ನ್ಯತ್ಯ, ಸಂಗೀತ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿದರೆ, ಬಹುಮುಖಿಯಲ್ಲಿ ವ್ಯಕ್ತಿತ್ವ ವಿಕಸನಗೊಳ್ಳಲಿದೆ. ಆದ್ದರಿಂದ ಪೋಷಕರು ಮಕ್ಕಳನ್ನು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸುವದು ಅವಶ್ಯಕವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗಡೆ ಮಾತನಾಡಿ, ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ವ್ಯಕ್ತಿತ್ವ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಮಕ್ಕಳನ್ನು ಬೌದ್ಧಿಕವಾಗಿ, ಭಾವನಾತ್ಮಕವಾಗಿ, ಮಾನಸಿಕವಾಗಿ ಹಾಗೂ ಆಧಾತ್ಮಿಕವಾಗಿ ಬೆಳೆಸಲು ನೆರವಾಗುವುದಕ್ಕೆ ಸೂಕ್ತ ತಿಳಿವಳಿಕೆ ನೀಡಬೇಕು. ಮಕ್ಕಳಿಗೆ ತರಬೇತಿ ಅಗತ್ಯವಿದೆ ಎಂಬುದನ್ನು ಮನಗಂಡು ಬಾಲ ಮಂದಿರದ ಮಕ್ಕಳಿಗೆ ಶಿಬಿರ ಏರ್ಪಡಿಸಲಾಗಿದೆ. ಇದರ ಪ್ರಯೋಜನವನ್ನು ಸಮರ್ಪಕವಾಗಿ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಬಸವರಾಜ ಬ್ಯಾಗವಾಟ ಮಾತನಾಡಿ, ವ್ಯಕ್ತಿಗಿಂತಲೂ ವ್ಯಕ್ತಿತ್ವ ದೊಡ್ಡದಾಗಿದೆ. ಅದರನ್ನು ಸರಿಯಾಗಿ ರೂಪಿಸಿಕೊಂಡಾಗ ಮಾತ್ರ ಜೀವನಕ್ಕೊಂದು ಅರ್ಥ ಬರುತ್ತದೆ. ಸದಾಚಾರ, ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯನ್ನು ಒಳಗೊಂಡ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುಪ್ರಸಾದ, ಅಧೀಕ್ಷಕ ಸೈಯದ್ ಪಾಷಾ ಆವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಸತೀಶ ಫರ್ನಾಂಡಿಸ್‌, ಶಾರದಾ ಪಾಟೀಲ, ಪ್ರಭುದೇವ ಪಾಟೀಲ ಇದ್ದರು.  

ಅನಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಸಾಮಾಜಿಕ ಕಾರ್ಯಕರ್ತ ತಿಕ್ಕಯ್ಯ ಸ್ವಾಗತಿಸಿದರು. ಅಸಾಂಸ್ಥಿಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಿರಿಲಿಂಗಪ್ಪ ನಿರೂಪಿಸಿದರು. ಆಪ್ತ ಸಮಾಲೋಚಕಿ ಮೀರಾಬಾಯಿ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !