ವಿದ್ಯಾರ್ಥಿಗಳಿಗೆ ನಗದು ಬಹುಮಾನ
ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯು ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ‘ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಸಾಧ್ಯವೇ’ ಎಂಬ ವಿಷಯದ ಮೇಲೆ ಭಾಷಣ ಸ್ಪರ್ಧೆ ಏರ್ಪಡಿಸಿತ್ತು. ಆ ಸ್ಪರ್ಧೆಯಲ್ಲಿ ಆಕ್ಸ್‌ಫರ್ಡ್ ಕಾಲೇಜಿನ ವಿದ್ಯಾರ್ಥಿ ಜಾಫರ್ ಪ್ರಥಮ ಅನಿಕೇತನ ಕಾಲೇಜು ವಿದ್ಯಾರ್ಥಿ ಗೌತಮ್ ದ್ವಿತೀಯ ಎಲ್‍ಬಿಕೆ ಕಾಲೇಜಿನ ವಿದ್ಯಾರ್ಥಿನಿ ಬಸಮ್ಮ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕರ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಅಜಯ್ ಪ್ರಥಮ ವಿಸಿಬಿ ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣ ದ್ವಿತೀಯ ಪಾಟೀಲ ಕಾಲೇಜಿನ ವಿದ್ಯಾರ್ಥಿ ಅಮರೇಶ ತೃತೀಯ ಸ್ಥಾನ ಪಡೆದಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಯಂತಿ ಹಾಗೂ ರಾಷ್ಟ್ರೀಯ ಐಕ್ಯತಾ ದಿನ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಾಸವಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಾರ್ಥನಾ ಪ್ರಥಮ ವಳಬಳ್ಳಾರಿ ಚನ್ನಬಸವೇಶ್ವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಮರೇಗೌಡ ದ್ವಿತೀಯ ಹಾಗೂ ವೀರಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರೇಶ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಥಮ ಬಹುಮಾನ ₹5 ಸಾವಿರ ದ್ವಿತೀಯ ಬಹುಮಾನ ₹3 ಸಾವಿರ ತೃತೀಯ ಬಹುಮಾನ ₹2 ಸಾವಿರ ಹಾಗೂ ಪ್ರಶಂಸನೀಯ ಪತ್ರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರು ವಿತರಿಸಿದರು.