ಸೋಮವಾರ, ಡಿಸೆಂಬರ್ 9, 2019
20 °C

ರಾಯಚೂರು: ಸಿಲಿಂಡರ್ ಸ್ಫೋಟ, ಮನೆ ವಸ್ತು ಕರಕಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕಣೂರು ಗ್ರಾಮದ ಚಿದಾನಂದ ಸಿಂಗ್ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡು,‌ ಆನಂತರ ಮನೆಯಲ್ಲಿದ್ದ ಎರಡು ಸಿಲಿಂಡರುಗಳು ಸ್ಫೋಟಗೊಂಡ ಘಟನೆ ಮಂಗಳವಾರ ರಾತ್ರಿ‌ ನಡೆದಿದೆ.

ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ. ಮನೆಯಲ್ಲಿದ್ದ ವಯೋವೃದ್ಧೆಯೊಬ್ಬರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಎರಡು ಸಿಲಿಂಡರಿನ ಸ್ಫೋಟದಿಂದ ಆತಂಕಕ್ಕೊಳಗಾದ ಗ್ರಾಮಸ್ಥರು ಕೆಲಕಾಲ ಗ್ರಾಮದಿಂದ ಹೊರಗೆ ಓಡಿ ಹೋಗಿದ್ದಾರೆ.

ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು