ರಾಯಚೂರು: ‘ರಾಯಚೂರು ಗ್ರಾಮೀಣ ಪ್ರದೇಶಕ್ಕೆ ಸೂಕ್ತ ನ್ಯಾಯದೊರಕಿಸುವ ನಿಟ್ಟಿನಲ್ಲಿ ರಾಯಚೂರು ತಾಲ್ಲೂಕು ವಿಭಜಿಸಿ ಎರಡು ಪ್ರತ್ಯೇಕ ತಾಲ್ಲೂಕು ಘೋಷಣೆ ಮಾಡಬೇಕು‘ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮನವಿ ಮಾಡಿದರು.

ರಾಯಚೂರು ಗ್ರಾಮೀಣ ಪ್ರದೇಶ 7 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ದೇವಸುಗೂರನ್ನು ಪಟ್ಟಣ ಪಂಚಾಯಿತಿಯನ್ನು ನಗರಸಭೆಯಾಗಿ ಮೇಲ್ದರ್ಜೇಗರಿಸಬೇಕು ಎಂದು ಹೇಳಿದರು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಅನುದಾನ ಕೊರತೆಯನ್ನು ಎದುರಿಸುತ್ತಿದೆ. ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಈ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಶಿಕ್ಷಕರ ನೇಮಕ ಮಾಡಿಕೊಂಡು ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕಿನಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ಹರಿದರೂ ಕಾಲುವೆ ಕೊನೆಯ ಅಂಚಿಗೆ ನೀರು ಹರಿದು ಬರುತ್ತಿಲ್ಲ.ಹೀಗಾಗಿ ಬ್ಯಾರೇಜ್ ನಿರ್ಮಾಣ, ಕೆರೆ ತುಂಬಿಸುವ ಯೋಜನೆ ಮಾಡಿಕೊಟ್ಟಿರುವುದಕ್ಕೆ ಋಣಿಯಾಗಿದ್ದೇನೆ. ಈ ಯೋಜನೆಗಳು ಪೂರ್ಣಗೊಂಡು ಕ್ಷೇತ್ರ ಸಂಪೂರ್ಣ ನೀರಾವರಿ ಆಗಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.